Fraud Case ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ: 1.50 ಕೋ.ರೂ. ವಂಚನೆ


Team Udayavani, Jul 20, 2024, 12:43 AM IST

Fraud Case ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ: 1.50 ಕೋ.ರೂ. ವಂಚನೆ

ಮಂಗಳೂರು: ಆನ್‌ಲೈನ್‌ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನಂಬಿಸಿ ಮಂಗಳೂರು ನಗರದ ನಿವಾಸಿಯೊಬ್ಬರಿಂದ 1.50 ಕೋ.ರೂ. ಪಡೆದು ವಂಚಿಸಿರುವ ಘಟನೆ ನಡೆದಿದೆ.

ದೂರುದಾರರು ಫೇಸ್‌ಬುಕ್‌ ವೀಕ್ಷಿಸುತ್ತಿದ್ದಾಗ “”Jefferies wealth multiplication Plan’ ’ ಎಂಬ ಪೋಸ್ಟ್‌ ನೋಡಿ ಅದರಲ್ಲಿದ ಪ್ರಶ್ನೆಗಳಿಗೆ ಉತ್ತರಿಸಿ ಅದರಲ್ಲಿ ಮೊಬೈಲ್‌ ಸಂಖ್ಯೆ ನಮೂದಿಸಿದ್ದರು. ಮೇ 3ರಂದು ಅಪರಿಚಿತ ವ್ಯಕ್ತಿಯೋರ್ವ ದೂರುದಾರರನ್ನು “Jefferies wealth multiplication center–223’’ ಗ್ರೂಪ್‌ಗೆ ಸೇರ್ಪಡೆಗೊಳಿಸಿದ. ಆ ಗ್ರೂಪ್‌ನಲ್ಲಿದ್ದ ಇತರ ಸದಸ್ಯರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಭ ಬಂದಿರುವುದಾಗಿ ಸ್ಕ್ರೀನ್‌ಶಾಟ್‌ಗಳನ್ನು ಹಾಕುತ್ತಿದ್ದರು. ಇದನ್ನು ನೋಡಿ ನಂಬಿದ ದೂರುದಾರರು ಪ್ರೇರಿತಗೊಂಡು ಹೂಡಿಕೆ ಮಾಡಲು ಮುಂದಾದರು. ಗ್ರೂಪ್‌ನ ಅಡ್ಮಿನ್‌ ಆಗಿದ್ದ ಅಪರಿಚಿತ ವ್ಯಕ್ತಿ ಜೂಲಿಯಾ ಸ್ಟನ್‌ ಎಂಬವರು ಸೈಟ್‌ನ ಲಿಂಕ್‌ ಅನ್ನು ದೂರುದಾರರಿಗೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಿದ್ದರು.

ಅನಂತರ ಅವರು ತಿಳಿಸಿರುವಂತೆ ದೂರುದಾರರು ಷೇರು ಮಾರ್ಕೆಟ್‌ಗೆ ಸಂಬಂಧಿಸಿದಂತೆ ಖಾತೆಯೊಂದನ್ನು ತೆರೆದಿದ್ದರು. ಷೇರುಗಳನ್ನು ಖರೀದಿಸಿ ಲಾಭ ಖರೀದಿಸುವ ಇರಾದೆಯಿಂದ ಮೇ 28ರಿಂದ ಜೂ.28ರ ವರೆಗೆ ಹಂತ ಹಂತವಾಗಿ 73 ಲ.ರೂ., 77 ಲ.ರೂ.ಗಳು ಸೇರಿದಂತೆ ಒಟ್ಟು 1.50 ಕೋ.ರೂ.ಗಳನ್ನು ಅಪರಿಚಿತ ವ್ಯಕ್ತಿ ನೀಡಿದ ಹಲವು ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಕೆಲವು ದಿನಗಳ ಬಳಿಕ ತಾನು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಮುಂದಾದಾಗ ವಿಥ್‌ಡ್ರಾ ಮಾಡಲು ಅಸಾಧ್ಯವಾಯಿತು.

ಚೀಫ್ ಅಡ್ಮಿನ್‌ನನ್ನು ವಾಟ್ಸ್‌ಆ್ಯಪ್‌ ಕರೆಯ ಮೂಲಕ ಸಂಪರ್ಕಿಸಿದಾಗ ಪ್ರತಿಕ್ರಿಯೆ ನೀಡಲಿಲ್ಲ. ಆಗ ದೂರುದಾರರಿಗೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಅವರು ಜು. 5ರಂದು ಎನ್‌ಸಿಸಿಆರ್‌ಪಿಗೆ (ನ್ಯಾಶನಲ್‌ ಸೈಬರ್‌ ಕ್ರೈಂ ರಿಪೋರ್ಟಿಂಗ್‌ ಪೋರ್ಟಲ್‌)ದೂರು ನೀಡಿದ್ದು ಅದರಂತೆ ಮಂಗಳೂರು ನಗರದ ಸೈಬರ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.