Mumbai: ಭಾರಿ ಮಳೆಗೆ ಕಟ್ಟಡ ಭಾಗ ಕುಸಿತ… ಮಹಿಳೆ ಮೃತ್ಯು, ಕಟ್ಟದಲ್ಲಿದ್ದವರ ರಕ್ಷಣೆ
Team Udayavani, Jul 20, 2024, 3:30 PM IST
ಮುಂಬೈ: ಮಹಾನಗರಿಯಲ್ಲಿ ಕಳೆದ ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು ಈ ನಡುವೆ ಇಲ್ಲಿನ ನಾಲ್ಕು ಅಂತಸ್ತಿನ ಕಟ್ಟಡದ ಭಾಗವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಮುಂಬೈ ಯಲ್ಲಿ ಶನಿವಾರ ಸಂಭವಿಸಿದೆ.
ಇಲ್ಲಿನ ಗ್ರಾಂಟ್ ರೋಡ್ ರೈಲು ನಿಲ್ದಾಣದ ಬಳಿ ಇರುವ ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ಭಾರಿ ಮಳೆಯಿಂದ ಬಿರುಕುಗೊಂಡು ಬೆಳಗ್ಗೆ 10.30ರ ಸುಮಾರಿಗೆ ಕುಸಿದು ಬಿದ್ದಿದೆ ಪರಿಣಾಮ ಕಟ್ಟಡ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೃತಪಟ್ಟರೆ, ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅಗ್ನಿಶಾಮಕ ಅಧಿಕಾರಿಗಳು ಕಟ್ಟಡದ ಭಾಗ ಕುಸಿದು ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ಪ್ರಗತಿಯಲ್ಲಿದೆ ಅಲ್ಲದೆ ಘಟನೆಗೆ ಸಂಬಂಧಿಸಿ ಇದುವರೆಗೆ ಕಟ್ಟಡದಲ್ಲಿದ್ದ ಹದಿಮೂರು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಹಳೆಯ ಕಟ್ಟಡವಾದ ಕಾರಣ ಅವಶೇಷಗಳು ಕುಸಿಯುವ ಹಂತದಲ್ಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಶುಕ್ರವಾರ ಭಾರೀ ಮಳೆಯಾಗಿದ್ದು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು ಬಸ್ ಸಂಚಾರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
#WATCH 1 dead as portion of building collapses. One person died & 13 others were injured as a part of the balcony of a building named Rubina Manzil collapsed in the Grand Road area of Mumbai amid #HeavyRain on Saturday. Rescue operations are underway. #Maharashtra #MumbaiRains pic.twitter.com/EGCqqtS3K8
— E Global news (@eglobalnews23) July 20, 2024
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.