BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
ರೇಣುಕಾಚಾರ್ಯ ಪ್ರಾಮಾಣಿಕವಾಗಿದ್ದರೆ ಧರ್ಮಸ್ಥಳಕ್ಕೆ ಬರಲಿ…
Team Udayavani, Jul 20, 2024, 5:37 PM IST
ದಾವಣಗೆರೆ: ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಎಂ.ಪಿ. ರೇಣುಕಾಚಾರ್ಯ ನೇತೃತ್ವದ ತಂಡದ ಕುತಂತ್ರವೇ ಕಾರಣ ಎಂದು ಬಿಜೆಪಿ ಜಿಲ್ಲಾ ಮುಖಂಡರು ಹರಿಹಾಯ್ದಿದ್ದಾರೆ.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ಯಶವಂತರಾವ್ ಜಾಧವ್ ಹಾಗೂ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ರೇಣುಕಾಚಾರ್ಯ ವಿರುದ್ದ ಟೀಕಾ ಪ್ರಹಾರ ನಡೆಸಿದರು.
ಚುನಾವಣೆಯಲ್ಲಿ ಅವರು ಬಿಜೆಪಿ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇ ಆದರೆ ಧರ್ಮಸ್ಥಳಕ್ಕೆ ಬಂದು ಮಂಜುನಾಥನ ಸನ್ನಿಧಿಯಲ್ಲಿ ಗಂಟೆ ಹೊಡೆಯಲಿ. ನಾವೂ ಗಂಟೆ ಹೊಡೆಯಲು ಸಿದ್ಧ. ಅವರೇ ಇದಕ್ಕಾಗಿ ದಿನಾಂಕ ನಿಗದಿ ಮಾಡಲಿ ಎಂದು ಸವಾಲೆಸೆದರು.
ಬಿಜೆಪಿಯಿಂದ ರೇಣುಕಾಚಾರ್ಯ ಅವರನ್ನು ಹೊರ ಹಾಕುವವರೆಗೂ ತಮ್ಮ ಹೋರಾಟ ಅಚಲ ಎಂದರು.
ವಿಧಾನಸಭೆ ಚುನಾವಣೆ ಬಳಿಕ ರೇಣುಕಾಚಾರ್ಯ ಕಾಂಗ್ರೆಸ್ ಕದ ತಟ್ಟಿದ್ದರು. ಇದಕ್ಕಾಗಿ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಭೇಟಿಯಾಗಿದ್ದರು. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗುವುದು ಒಂದು ವಾರ ತಡವಾಗಿದ್ದರೂ ಅವರು ಕಾಂಗ್ರೆಸ್ ಸೇರಿರುತ್ತಿದ್ದರು ಎಂದು ಆರೋಪಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 66 ಸ್ಥಾನ ಬರಲು ರೇಣುಕಾಚಾರ್ಯರೇ ಕಾರಣ. ಅವರು ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವೇ ತಮ್ಮ ಕುಟುಂಬ ಸದಸ್ಯರಿಗೆ ಬೇಡಜಂಗಮ ಪ್ರಮಾಣ ಪತ್ರದೊಂದಿಗೆ ಸ್ಪರ್ಧಿಸುವಂತೆ ಮಾಡಿದರು. ಬಳಿಕ ಸ್ಪರ್ಧೆಯಿಂದ ಹಿಂದಕ್ಕೆ ಸರಿಸಿದಾದರೂ ಈ ವಿಚಾರ ಕೂಡ ರಾಜ್ಯದಲ್ಲಿ ಬಿಜೆಪಿ ಹಿನ್ನಡೆಗೆ ಕಾರಣವಾಯಿತು ಎಂದರು.
ರೇಣುಕಾಚಾರ್ಯ ಅವರಿಗೆ ಪ್ರಚಾರದಗೀಳಿದೆ. ಅವರೊಬ್ಬ ಟಿಆರ್‌ಪಿ ರಾಜಕಾರಣಿ. ಮೊಣಕಾಲಷ್ಟು ನೀರಿಲ್ಲದ ಹೊಳೆಯಲ್ಲಿ ತೆಪ್ಪ ಸಾಗಿಸಿ, ನಗೆಪಾಟಲಿಗೀಡಾದವರು. ಏನಾದಾರೂ ಮಾತನಾಡಿ ಸದಾ ಸುದ್ದಿಯಲ್ಲಿರಬೇಕು ಎಂಬ ದುರ್ಬುದ್ಧಿ ಅವರದ್ದಾಗಿದೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ರೆಸಾರ್ಟ್ ರಾಜಕಾರಣ ಮಾಡಿ ಅವರಿಗೆ ಧಮಕಿ ಹಾಕಿದವರು. ಅವರು ಪಕ್ಷದ ಯಾವ ನಾಯಕರನ್ನೂ ಬಿಟ್ಟಿಲ್ಲ ಎಲ್ಲರ ವಿರುದ್ಧವೂ ಮಾತನಾಡಿದ್ದಾರೆ; ಎಲ್ಲರಿಗೂ ಕಿರುಕುಳ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ವೇಳೆಯಲ್ಲಿ ಗೃಹ ಸಚಿವ ಅಮಿತ್ ಶಾ ಸ್ವತಃ ಕೈಮುಗಿದು ಭಿನ್ನಾಭಿಪ್ರಾಯ ಬಿಟ್ಟು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಲು ಸಹಕರಿಸಿ ಎಂದು ಕೇಳಿಕೊಂಡಿದ್ದರು. ಆದರೂ ರೇಣುಕಾಚಾರ್ಯ ನೇತೃತ್ವದ ಲಗಾನ್ ತಂಡ ಅವರ ಮಾತಿಗೆ ಮನ್ನಣೆ ಕೊಟ್ಟಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.