Engineering ಪ್ರವೇಶ ಶುಲ್ಕ ಶೇ. 10 ಹೆಚ್ಚಳಕ್ಕೆ ಅಸ್ತು

2024-25ರ ಸಾಲಿನ ಪ್ರವೇಶಕ್ಕೆ ಅನ್ವಯ

Team Udayavani, Jul 21, 2024, 6:50 AM IST

Exam

ಬೆಂಗಳೂರು: ಸರಕಾರಿ, ವಿಶ್ವವಿದ್ಯಾನಿಲಯ, ಖಾಸಗಿ ಅನುದಾನಿತ, ಖಾಸಗಿ ಅನುದಾನ ರಹಿತ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಿಸಿ ರಾಜ್ಯ ಸರಕಾರ ಆದೇಶಿಸಿದೆ. ಈ ಪರಿಷ್ಕೃತ ಶುಲ್ಕ 2024-25ರ ಸಾಲಿನ ಪ್ರವೇಶಕ್ಕೆ ಅನ್ವಯವಾಗಲಿದೆ.

ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಶೇ. 100 ಸರಕಾರಿ ಕೋಟಾದ ಸೀಟುಗಳಿಗೆ, ಮೈಸೂರು ವಿಶ್ವವಿನಿದ್ಯಾಲಯ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಗಳ ಶೇ. 50 ಎಂಜಿನಿಯರಿಂಗ್‌ ಮತ್ತು ಆರ್ಕಿ ಟೆಕ್ಚರ್‌ ಸೀಟುಗಳಿಗೆ 42,116 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿ.ವಿ. (ಯುವಿಸಿಇ)ಗೆ 47,250 ರೂ., ಖಾಸಗಿ ಅನುದಾನಿತ ಕಾಲೇಜು ಮತ್ತು ಖಾಸಗಿ ವಿ.ವಿ.ಗಳ ಸರಕಾರಿ ಕೋಟಾದ ಸೀಟುಗಳಿಗೆ 42,116 ರೂ., ಖಾಸಗಿ ಅನುದಾನರಹಿತ ಎಂಜಿನಿಯರಿಂಗ್‌/ಆರ್ಕಿಟೆಕ್ಚರ್‌ ಕಾಲೇಜುಗಳ ಸರಕಾರಿ ಕೋಟಾದ ಸೀಟುಗಳಿಗೆ 76,135 ರೂ. ಅಥವಾ 84,596 ರೂ. ನಿಗದಿಪಡಿಸಲಾಗಿದೆ.

ಕಾಮೆಡ್‌-ಕೆ ಕೋಟಾದ ಸೀಟುಗಳು ಹಾಗೂ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾಕ ವೃತ್ತಿಪರ ಕಾಲೇಜುಗಳ ಒಕ್ಕೂಟದ ಕಾಲೇಜುಗಳಿಗೆ 1,86,111 ರೂ. ಅಥವಾ 2,61,477 ರೂ., ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇತರ ಶುಲ್ಕಕ್ಕೆ ಷರತ್ತು
ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಪ್ರತೀ ವಿದ್ಯಾರ್ಥಿಯಿಂದ ಇತರ ಶುಲ್ಕವಾಗಿ ವಾರ್ಷಿಕ 20 ಸಾವಿರ ರೂ. ಮೀರದಂತೆ ಪ್ರಥಮ ವರ್ಷದ ಶುಲ್ಕವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶೇ. 15ರಷ್ಟು ಶುಲ್ಕ ಏರಿಕೆಗೆ ಬೇಡಿಕೆ ಸಲ್ಲಿಸಿದ್ದವು. ಆದರೆ ಸರಕಾರ ಶೇ. 10ರಷ್ಟು ಶುಲ್ಕ ಏರಿಸಲು ತೀರ್ಮಾನಿಸಿತ್ತು. ಅದರಂತೆ ಹೊಸ ಶುಲ್ಕ ಸಂರಚನೆಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಕಳೆದ ವರ್ಷ ಎಷ್ಟು ಶುಲ್ಕ ಇತ್ತು?
ಕಳೆದ ವರ್ಷ ಸರಕಾರಿ ಮತ್ತು ಅನುದಾನಿತ ಕಾಲೇಜು ಗಳ ಸರಕಾರಿ ಕೋಟಾದ ಸೀಟುಗಳಿಗೆ 40,860 ರೂ., ಯುವಿಸಿಇ ಕಾಲೇಜು 45,000 ರೂ., ಅನುದಾನ ರಹಿತ ಮತ್ತು ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಿಗೆ 69,214 ರೂ. ಅಥವಾ 76,905 ರೂ., ಕಾಮೆಡ್‌-ಕೆ ಸೀಟುಗಳಿಗೆ ಹಾಗೂ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾಕ ವೃತ್ತಿಪರ ಕಾಲೇಜುಗಳ ಒಕ್ಕೂಟದ ಕಾಲೇಜುಗಳಿಗೆ 1,69,192 ಅಥವಾ 2,33,706 ರೂ. ಶುಲ್ಕ ನಿಗದಿಯಾಗಿತ್ತು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.