MUDA ತಿರುವು: ಸಿಎಂಗೆ ಮೂಲ ವಾರಸುದಾರರ ಸಂಕಷ್ಟ

ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿರುವ ಭೂಮಿ ನಮ್ಮದು!

Team Udayavani, Jul 21, 2024, 6:55 AM IST

siddanna

ಮೈಸೂರು: ಮುಡಾ ನಿವೇಶನದ ಮೂಲ ಜಮೀನಿನ ವಾರಸುದಾರರಾದ ನಮಗೆ ನಮ್ಮ ಚಿಕ್ಕಪ್ಪ ದೇವರಾಜು ಎಂಬವರು ಅನ್ಯಾಯ ಮಾಡಿದ್ದಾರೆ ಎಂದು ಜವರಯ್ಯ ಹಾಗೂ ಮಂಜುನಾಥ್‌ ಎಂಬವರು ಚಿಕ್ಕಪ್ಪ ದೇವರಾಜು ವಿರುದ್ಧ ದೂರು ನೀಡಿದ್ದು, ಮುಡಾ ಹಗರಣಕ್ಕೆ ಹೊಸ ತಿರುವು ಸಿಕ್ಕಿದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೇರಿದ್ದು ಎನ್ನಲಾದ ಮೈಸೂರಿನ ಕೆಸರೆ ಬಳಿ ಇರುವ ಸರ್ವೇ ನಂಬರ್‌ 464ರಲ್ಲಿ 3.16 ಎಕರೆ ಜಮೀನನ್ನು ನಮ್ಮ ಒಪ್ಪಿಗೆ ಇಲ್ಲದೆ, ನಮ್ಮ ಚಿಕ್ಕಪ್ಪ ದೇವರಾಜು ನಮ್ಮ ಗಮನಕ್ಕೆ ತರದೆ ಸಿಎಂ ಪತ್ನಿಯ ಸಂಬಂಧಿಕರಿಗೆ ಮಾರಾಟ ಮಾಡಿದ್ದಾರೆ ಎಂದು ಭೂಮಿಯ ಮೂಲ ವಾರಸುದಾರರು ಎನ್ನ ಲಾದ ಜವರಯ್ಯ ಹಾಗೂ ಮಂಜುನಾಥ್‌ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ನಾಯಕರೊಂದಿಗೆ ಅಪರ ಜಿಲ್ಲಾಧಿಕಾರಿ ಶಿವರಾಜ್‌ ಅವರನ್ನು ಭೇಟಿ ಯಾದ ಈ ಇಬ್ಬರು, ನಮ್ಮ ಚಿಕ್ಕಪ್ಪ ನಮ್ಮ ಜಮೀನನ್ನು ಮಾರಾಟ ಮಾಡಿ ಅನ್ಯಾಯ ಮಾಡಿದ್ದಾರೆ. ಹೀಗಾಗಿ ನಮಗೆ ನ್ಯಾಯ ಒದಗಿಸಿ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ. ಈ ವೇಳೆ ಬಿಜೆಪಿ ನಾಯಕರಾದ ಎನ್‌. ಮಹೇಶ್‌, ಶಾಸಕ ಟಿ.ಎಸ್‌. ಶ್ರೀವತ್ಸ, ಎಲ್‌. ನಾಗೇಂದ್ರ ಇದ್ದರು.

ಬಿಜೆಪಿ ನಿಯೋಗದಿಂದ ಭೇಟಿ
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಬಹುಕೋಟಿ ರೂ. ಹಗರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ನಾಯಕರು ಈ ಸಂಬಂಧ ಹೋರಾಟವನ್ನು ಮುಂದು ವರಿಸಿದ್ದಾರೆ. ಇದಕ್ಕೆ ಪೂರಕವಾಗಿ ಶನಿವಾರ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದರು ಎನ್ನಲಾದ ಮೂಲ ಮಾಲಕರ ಕುಟುಂಬಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಾಜಿ ಸಚಿವ ಎನ್‌. ಮಹೇಶ್‌ ನೇತೃತ್ವದಲ್ಲಿ ಮೈಸೂರಿನ ಗಾಂಧಿನಗರದಲ್ಲಿರುವ ಮಲ್ಲಯ್ಯ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿದ ಬಿಜೆಪಿ ಮುಖಂಡರು ಜಮೀನು ಮಾರಾಟ ವಿಷಯ ಕುರಿತಂತೆ ಜಮೀನಿನ ಮೂಲ ಮಾಲಕ ದಿ| ಜವರ ಅವರ ಮೊಮ್ಮಗ ಜವರಯ್ಯ, ಅವರ ಪತ್ನಿ ಪುಷ್ಪಾ ಹಾಗೂ ಮಗ ದರ್ಶನ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ನಿಯೋಗದ ಸದಸ್ಯರ ಎದುರು ತಮ್ಮ ಅಳಲು ತೋಡಿಕೊಂಡ ಕುಟುಂಬಸ್ಥರು, ತಮ್ಮ ಕುಟುಂಬಕ್ಕೆ ದೇವರಾಜು ಮೋಸ ಮಾಡಿ ಆಸ್ತಿ ಮಾರಾಟ ಮಾಡಿದ್ದು, ಈ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ಇದರಿಂದಾಗಿ ನಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿಕೊಡುವಂತೆ ಮನವಿ ಮಾಡಿಕೊಂಡರು. ಕುಟುಂಬಸ್ಥರ ಸಮಸ್ಯೆ ಆಲಿಸಿದ ಬಿಜೆಪಿ ನಾಯಕರು ಮನವಿ ಪತ್ರಕ್ಕೆ ಸಹಿ ಹಾಕಿಸಿಕೊಂಡು, ನ್ಯಾಯ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಎನ್‌. ಮಹೇಶ್‌, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಸ್ಥರು ಖರೀದಿಸಿ¨ªಾರೆ ಎನ್ನಲಾಗಿರುವ ಸದರಿ ಜಮೀನು ಜವರ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ. ಜವರನಿಗೆ ಮಲ್ಲಯ್ಯ, ಮೈಲಾರಯ್ಯ ಹಾಗೂ ದೇವರಾಜು ಎಂಬ ಮೂವರು ಮಕ್ಕಳಿದ್ದು, ಇವರಲ್ಲಿ ಈ ಜಮೀನನ್ನು ದೇವರಾಜ ಒಬ್ಬನೇ ಮಾರಾಟ ಮಾಡಿದ್ದಾರೆ. ಆದರೆ ಇದರಲ್ಲಿ ಆತನ ಸಹೋದರರಾದ ಮಲ್ಲಯ್ಯ ಮತ್ತು ಮೈಲಾರಯ್ಯ ಅವರಿಗೂ ಪಾಲು ಸಿಗಬೇಕಿತ್ತು. ಈ ನಿಟ್ಟಿನಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಕುಟುಂಬಸ್ಥರು ಮನವಿ ಕೊಟ್ಟಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೂ ಮನವಿ ನೀಡಿ ಎಂದಿದ್ದೇನೆ ಎಂದರು.

ದೇವರಾಜು ಜಮೀನು ಮಾರಾಟ ಮಾಡುವಾಗ ಜಮೀನಿನ ಇತರ ವಾರಸುದಾರರ ಮಲ್ಲಯ್ಯ ಮತ್ತು ಮೈಲಾರಯ್ಯ ಸಹಿ ಹಾಗೂ ಒಪ್ಪಿಗೆ ಪಡೆಯಬೇಕಿತ್ತು. ಆದರೆ ಇದಾವುದನ್ನೂ ಮಾಡದೆ ಒಬ್ಬನೇ ಜಮೀನಿನ ಲಾಭ ಪಡೆದುಕೊಂಡಿದ್ದಾನೆ. ಆದ್ದರಿಂದ ಉಳಿದ ಇಬ್ಬರಿಗೂ ಪಾಲು ದೊರೆಯಬೇಕು ಎಂಬುದು ನಮ್ಮ ವಾದ. ದಲಿತರ ಜಮೀನನ್ನು ಸಿದ್ದರಾಮಯ್ಯ ಖರೀದಿ ಮಾಡಬಾರದು ಎಂದೇನಿಲ್ಲ. ಆದರೆ ಸ್ವಯಾರ್ಜಿತ ಆಸ್ತಿಯನ್ನು ಖರೀದಿ ಮಾಡಬಹುದಾಗಿದೆ ಎಂದ ಅವರು, ಮುಡಾ ಹಗರಣದ ಕುರಿತಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಆದರೆ ಈ ತನಿಖೆಯನ್ನು ಸಿಬಿಐ ಮೂಲಕ ನಡೆಯಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.