Mangaluru ನಂತೂರು ಮೇಲ್ಸೇತುವೆ ಪೂರ್ವಭಾವಿ ಕಾರ್ಯ ಪೂರ್ಣಗೊಳಿಸಿ

ಎನ್‌ಎಚ್‌ಎಐ ಅಧಿಕಾರಿಗಳಿಗೆ ಸಂಸದ ಕ್ಯಾ| ಚೌಟ ಸೂಚನೆ

Team Udayavani, Jul 21, 2024, 6:18 AM IST

1-chou-2

ಮಂಗಳೂರು: ನಂತೂರು ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಅಗತ್ಯವಿರುವ ಕಟ್ಟಡ, ರಚನೆಗಳ ತೆರವು, ವಿದ್ಯುತ್‌ ಲೈನ್‌, ನೀರಿನ ಪೈಪ್‌ಲೈನ್‌ ಸ್ಥಳಾಂತರ ಕುರಿತಂತೆ ಬಾಕಿ ಇರುವ ಎಲ್ಲ ಕಾರ್ಯಗಳನ್ನೂ ತ್ವರಿತವಾಗಿ ಕೈಗೊಳ್ಳುವಂತೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ನಂತೂರು ಹಾಗೂ ಕೆಪಿಟಿಯ ವಾಹನ ಮೇಲ್ಸೇತುವೆಗಳ ಕುರಿತು ಶನಿವಾರ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.

ನಗರದ ವ್ಯಾಪ್ತಿಯ ಹೆದ್ದಾರಿಗಳಲ್ಲಿ ಹಿಂದೆ ನಿರ್ಮಿಸಿರುವ ಫ್ಲೆ$çಓವರ್‌ಗಳು ಗುಣಮಟ್ಟ ಹೊಂದಿಲ್ಲ. ಅದು ಎನ್‌ಎಚ್‌ಎಐನ ಘನತೆಗೂ ತಕ್ಕು ದಲ್ಲ. ಹಾಗಾಗಿ ಈಗ ನಿರ್ಮಿಸುವ ಹೊಸ ಮೇಲ್ಸೇತುವೆಗಳು ನಗರದ ಸಮಗ್ರ ಅಭಿವೃದ್ಧಿ, ಸುಗಮ ಸಂಚಾರಕ್ಕೆ ಪೂರಕವಾಗಿರುವಂತೆ ನೋಡಿ ಕೊಳ್ಳ ಬೇಕು ಎಂದು ಸಂಸದರು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಅಬ್ದುಲ್ಲ ಜಾವೇದ್‌ ಅಜ್ಮಿಗೆ ಸೂಚಿಸಿದರು.

60 ಕೋಟಿ ರೂ. ವೆಚ್ಚದ ಪ್ರಸ್ತಾವಿತ ಮೇಲ್ಸೇತುವೆಗೆ ಸದ್ಯ ಪರಿಶಿಷ್ಟ ವಿದ್ಯಾರ್ಥಿಗಳ ಹಾಸ್ಟೆಲ್‌ ಕಾಂಪೌಂಡ್‌, ಮಲ್ಯ ಪ್ರತಿಮೆ ಇರುವ ಪಾರ್ಕ್‌, ಮಿಯಾವಾಕಿ ಉದ್ಯಾನವನ ಸಹಿತ ಕೆಲವೊಂದು ಅಡಚಣೆಗಳು ಬಾಕಿ ಇವೆ. ಇವುಗಳನ್ನು ಬಗೆಹರಿಸಿಕೊಂಡು ಆರಂಭದಲ್ಲಿ ನಂತೂರು ಜಂಕ್ಷನ್‌ನ ಮಧ್ಯದಲ್ಲಿ 2025ರ ಮಾರ್ಚ್‌ ವೇಳೆಗೆ ಓವರ್‌ಪಾಸ್‌ನ ಮಧ್ಯ ಭಾಗವನ್ನು ನಿರ್ಮಿಸಬಹುದು. ಆ ಬಳಿಕ ಇಕ್ಕೆಲಗಳ ಸರ್ವಿಸ್‌ ರಸ್ತೆ ಕಾಮಗಾರಿ 7 ಮೀಟರ್‌ ಅಗಲವಾಗಿ ಕೈಗೊಳ್ಳಲಾಗುವುದು. ಓವರ್‌ ಪಾಸ್‌ 9 ಮೀ. ಅಗಲ ಹೊಂದಿರಲಿದ್ದು, ಒಟ್ಟು ಕಾಮಗಾರಿ ಮುಗಿಯಲು 2 ವರ್ಷ ಬೇಕಾಗಬಹುದು ಎಂದರು.

ಸ್ಥಳೀಯ ಕಾರ್ಪೊರೇಟರ್‌ಗಳಾದ ಶಕೀಲಾ ಕಾವ ಹಾಗೂ ಮನೋಹರ್‌ ನೆರವಿನೊಂ ದಿಗೆ ಬಾಕಿ ಇರುವ ತೆರವು ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಈಗಾಗಲೇ ಹಾಕಿರುವ ಭೂಗತ ಕೇಬಲನ್ನು ಮತ್ತೆ ತೆರವು ಮಾಡಬೇಕಾಗುತ್ತದೆ. ಅದಕ್ಕಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಆದ್ಯತೆ ಮೇರೆಗೆ ಕೆಲಸ ನಡೆಸಿಕೊಡಬೇಕು ಎಂದರು.

ನಂತೂರಿಗೆ ಮೂರು ಸ್ತರಗಳ ಮೇಲ್ಸೇತುವೆ ವಿನ್ಯಾಸವನ್ನು ಖಾಸಗಿ ಯಾಗಿ ಕ್ರೆಡೈ ರಚಿಸಿದ್ದು, ಅಧ್ಯಕ್ಷ ವಿನೋದ್‌ ಪಿಂಟೋ ಅವರು ಪ್ರಸ್ತುತಪಡಿಸಿದ್ದು, ಕಾರ್ಯ ಸಾಧ್ಯತೆ ಬಗ್ಗೆ ಚರ್ಚಿಸಲಾಯಿತಾದರೂ ಅದು ಅಧಿಕ ವೆಚ್ಚದಾಯಕವಾಗಿರುವ ಕಾರಣ ಒಮ್ಮತ ವ್ಯಕ್ತವಾಗಲಿಲ್ಲ.

ಕುಡಿಯುವ ನೀರಿನ ಪೈಪ್‌ಲೈನ್‌ ಸ್ಥಳಾಂತರಕ್ಕೆ 2.5 ಕೋಟಿ ರೂ. ಪ್ರಸ್ತಾವನೆಯನ್ನು ಪಾಲಿಕೆ ಸಲ್ಲಿಸಿದೆ. ಆದರೆ ಅಷ್ಟು ಮೊತ್ತ ಒದಗಿಸುವಂತಿಲ್ಲ ಎಂದು ಎನ್‌ಎಚ್‌ಎಐ ಅಧಿಕಾರಿ ಆರಂಭದಲ್ಲಿ ತಿಳಿಸಿದರು. ಆ ವಿಷಯವನ್ನು ತ್ವರಿತವಾಗಿ ಬಗೆಹರಿಸಿ ಎಂದು ಶಾಸಕ ವೇದವ್ಯಾಸ ಕಾಮತ್‌ ಸೂಚಿಸಿದರು. ಡಿ.ಸಿ. ಮುಲ್ಲೆ$ç ಮುಗಿಲನ್‌, ಡಿಸಿಪಿ ದಿನೇಶ್‌ ಕುಮಾರ್‌, ವಿಶೇಷ ಭೂಸ್ವಾಧೀ ನಾಧಿಕಾರಿ ಇಸಾಕ್‌ ಇದ್ದರು.

ಹೆದ್ದಾರಿ ಸ್ಥಿತಿ ಸುಧಾರಣೆಗೆ ಆದ್ಯತೆ ಕೊಡಿ
ರಾಷ್ಟ್ರೀಯ ಹೆದ್ದಾರಿಯ ಅನೇಕ ಕಡೆ ಗುಂಡಿಗಳು, ನೀರು ನಿಲ್ಲುವುದು, ಸರಿಯಾದ ಎಚ್ಚರಿಕೆ ಫಲಕ, ಸೂಚನಾ ಫಲಕ ಹಾಕದಿರುವುದರಿಂದ ಸಮಸ್ಯೆಯಾಗುತ್ತಿದೆ. ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ಇದನ್ನು ಸರಿಪಡಿಸಬೇಕು ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು ಎಚ್‌ಎಚ್‌ಎಐ ಅಧಿಕಾರಿಯ ಗಮನಕ್ಕೆ ತಂದರು.
ಬಿ.ಸಿ.ರೋಡ್‌ನಿಂದ ಸುರತ್ಕಲ್‌ ವರೆಗೆ ಹೆದ್ದಾರಿಯ ಬಾಕಿ ಉಳಿದ ಕೆಲಸಗಳು, ನಿರ್ವಹಣೆಗೆ ಆಗಬೇಕಾದ ಕಾರ್ಯಗಳು, ಅದರ ವೆಚ್ಚವನ್ನು ಪರಿಶೀಲಿಸಿ ಶೀಘ್ರ ನೀಡುವಂತೆಯೂ ಅಧಿಕಾರಿಗೆ ಸೂಚಿಸಲಾಯಿತು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.