Padavinangady: 2 ಕಡೆ ಕಳವಿಗೆ ಯತ್ನ ಮನೆಮಂದಿ ಇದ್ದಾಗಲೇ ಬಾಗಿಲು ಒಡೆಯಲು ಯತ್ನಿಸಿದ ಕಳ್ಳರು

Team Udayavani, Jul 22, 2024, 6:45 AM IST

Padavinangady: 2 ಕಡೆ ಕಳವಿಗೆ ಯತ್ನ ಮನೆಮಂದಿ ಇದ್ದಾಗಲೇ ಬಾಗಿಲು ಒಡೆಯಲು ಯತ್ನಿಸಿದ ಕಳ್ಳರು

ಮಂಗಳೂರು: ನಗರದಲ್ಲಿ ಮತ್ತೆ ಕಳ್ಳರ ಹಾವಳಿ ಕಂಡುಬಂದಿದ್ದು ಪದವಿನಂಗಡಿಯ ಎರಡು ಕಡೆ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

ರವಿವಾರ 1.45ರ ವೇಳೆಗೆ ಪದವಿನಂಗಡಿಯ ಮಹಾತ್ಮನಗರ ಬಡಾವಣೆಯ ಮನೆಯೊಂದರ ಮುಖ್ಯಗೇಟ್‌ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್‌ ಗೇಟ್‌ ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿದ್ದಾರೆ. ಆಗ ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿ ಎಲ್ಲ ಲೈಟ್‌ಗಳನ್ನು ಹಾಕಿದರು. ಆ ವೇಳೆ ಕಳ್ಳರು ಓಡಿ ಹೋಗಿದ್ದಾರೆ. ಮನೆಯವರು ಪೊಲೀಸರು ಹಾಗೂ ನೆರೆಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಕಾವೂರು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ದೇವಸ್ಥಾನದಲ್ಲಿ ಕಳವಿಗೆ ಯತ್ನ
ಶನಿವಾರ ತಡರಾತ್ರಿ ಸುಮಾರು ನಾಲ್ವರ ತಂಡ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿದೆ. ದೇವಸ್ಥಾನದ ಬಳಿ ಓಡಾಡುತ್ತಿದ್ದ ಕಳ್ಳರ ಕೈಯಲ್ಲಿದ್ದ ಟಾರ್ಚ್‌ನ ಬೆಳಕು ದೇವಸ್ಥಾನದ ಪಕ್ಕದ ಮನೆಯವರಿಗೆ ಕಂಡು ಅವರು ಎಚ್ಚರಗೊಂಡರು. ಮನೆಯ ಹೊರಭಾಗದ ಲೈಟ್‌ಗಳನ್ನು ಹಾಕಿದಾಗ ಕೆಲವು ಮಂದಿ ದೇವಸ್ಥಾನದ ಬಳಿಯಿಂದ ಹೋಗುತ್ತಿರುವುದು ಗೊತ್ತಾಗಿದೆ. ಈ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

ಎರಡೂ ಘಟನೆಗಳ ಬಗ್ಗೆ ಕಾವೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚೆಗೆ ನಗರದಲ್ಲಿ ಚಡ್ಡಿಗ್ಯಾಂಗ್‌ನಿಂದ ಒಂದು ಕಡೆ ಕಳ್ಳತನ, ಇನ್ನೊಂದು ಕಡೆ ದರೋಡೆ ನಡೆದಿತ್ತು. ಅನಂತರ ಚಡ್ಡಿಗ್ಯಾಂಗ್‌ನ್ನು ಬಂಧಿಸಲಾಗಿತ್ತು. ಅಲ್ಲದೆ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ್ದ ಕಳ್ಳರ ಮತ್ತೂಂದು ತಂಡವನ್ನು ಕೂಡ ಬಂಧಿಸಲಾಗಿತ್ತು. ಇದೀಗ ಮತ್ತೂಂದು ಕಳ್ಳರ ತಂಡ ಕ್ರಿಯಾಶೀಲವಾಗಿದೆ. ನಿರಂತರ ಮಳೆಯಾಗುತ್ತಿರುವ ಹೊತ್ತಿನಲ್ಲಿ ಕಳ್ಳರು ಇಂತಹ ಕೃತ್ಯಕ್ಕೆ ಮುಂದಾಗುತ್ತಿದ್ದಾರೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.