Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
ಸಿಎಂ ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಮಾಡುವ ಬದಲು ಹಗರಣಗಳ ತನಿಖೆ ಮಾಡಿಸಲಿ
Team Udayavani, Jul 21, 2024, 9:26 PM IST
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಮಾಡುವ ಬದಲು ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ, ಹಗರಣಗಳ ತನಿಖೆ ಮಾಡಿಸಲಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸರ್ಕಾರಗಳ ಅವಧಿಯಲ್ಲಿ ನಡೆದಿರುವ ಹಗರಣ, ಭ್ರಷ್ಟಾಚಾರದ ತನಿಖೆ ಮಾಡಿಸುತ್ತೇವೆ ಎಂದು ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಮಾಡುವ ಬದಲಿಗೆ ಅವರದ್ದೇ ಸರ್ಕಾರ, ಅಧಿಕಾರ ಇದೆ. ಕಾಂಗ್ರೆಸ್ ಮಾತ್ರವಲ್ಲ ಅಧಿಕಾರ ನಡೆಸಿದ ಎಲ್ಲ ಪಕ್ಷಗಳ ಸರ್ಕಾರದ ಅವಧಿಯಲ್ಲಿನ ಹಗರಣ, ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಸಲಿ ಬೇಡ ಅಂದವರು ಯಾರು ಎಂದು ಪ್ರಶ್ನಿಸಿದರು.
ವಾಲ್ಮೀಕಿ ಹಗರಣದ ತನಿಖೆಯನ್ನು ಎಸ್‌ಐಟಿ ಮೂಲಕ ಮಾಡಿಸಿ, ಮಾಜಿ ಸಚಿವ ನಾಗೇಂದ್ರಗೆ ಕ್ಲೀನ್ ಚಿಟ್ ನೀಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ. ಎಸ್‌ಐಟಿ ಅಂದ್ರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ.. ಎಂದು ದೂರಿದರು.
ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಸಂಪೂರ್ಣ ಮನೆಗಳು ಬಿದ್ದವರಿಗೆ ಮನೆಗೆ ನೆರವು, ಮನೆ ಬಾಡಿಗೆ ಕಟ್ಟಲು ಹಣ ನೀಡುತ್ತಿದ್ದೆವು. ಆದರೆ, ಸುಳ್ಳು ಪ್ರಚಾರ, ಭರವಸೆ, ಬೋಗಸ್ ಆಶ್ವಾಸನೆ ನೀಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ.
ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಬಳಸಿಕೊಳ್ಳುತ್ತಿದೆ. ವಾಲ್ಮೀಕಿ ನಿಗಮ, ಮುಡಾದ ಬ್ರಹ್ಮಾಂಡ ಭ್ರಷ್ಟಾಚಾರ ಎಲ್ಲವೂ ಜನರ ಕಣ್ಣುಗಳ ಮುಂದಿವೆ. ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯನವರೇ 2013 ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದಿರಿ. ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ, ಜಗದೀಶ ಶೆಟ್ಟರ್ ಮೇಲೆ ಆರೋಪ ಮಾಡಿದ್ದಾರೆ, ಅರ್ಕಾವತಿ ಬಡಾವಣೆಯ ಹಗರಣದ ಕಡತವನ್ನು ಜಗದೀಶ ಶೆಟ್ಟರ್ ಕಡತವನ್ನು ತಿರಸ್ಕರಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆದಾಗ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರದ ಅರ್ಕಾವತಿ ಕಡತಕ್ಕೆ ರೀಡೂ ಅಂತಾ ಮಾಡಿದ್ದೀರಿ. ಮಾಡಿ ಫೈ ಮಾಡಿ, ರೀಡೂ ಮಾಡಿದ್ದೂ ನೀವಲ್ಲವೇ ಎಂದು ಪ್ರಶ್ನಿಸಿದರು.
ಬೆಳೆ ಹಾನಿ ಪರಿಹಾರ ನೀಡುವ ಕಡೆ ಸಿದ್ದರಾಮಯ್ಯ ಸರ್ಕಾರ ಗಮನಹರಿಸಲಿ. ಇಂದಿಗೂ ಬರ ಪರಿಹಾರವನ್ನೇ ಈ ಸರ್ಕಾರ ನೀಡಿಲ್ಲ. ಹಿಂದಿನಿಂದಲೂ ಕೇಂದ್ರದತ್ತ ಬೊಟ್ಟು ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಲೇ ಬಂದಿ ದ್ದಾರೆ. ಈಗಲೂ ಅದನ್ನೇ ಮಾಡದೆ ರೈತರಿಗೆ ಬರ ಪರಿಹಾರ ನೀಡುವ ಮನಸ್ಸು ಮಾಡಲಿ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಒಂದೇ ಒಂದು ಗ್ರಾಪಂಗೆ ಒಂದು ಮನೆಯನ್ನೂ ಕೊಟ್ಟಿಲ್ಲ. ನಮ್ಮ ಸರ್ಕಾರವಿದ್ದಾಗ ನಮ್ಮ ನಮ್ಮ ಕ್ಷೇತ್ರಕ್ಕೆ 4500 ಮನೆ ತಂದಿದ್ದೆವು. ಸಿದ್ದರಾಮಯ್ಯನವರದ್ದು ದುರಂತದ ಸರ್ಕಾರವಾಗಿದೆ. ಇದೊಂದು ಪಾಪದ ಸರ್ಕಾರವಿದ್ದು, ದಪ್ಪನೆಯ ಚರ್ಮದ ಸರ್ಕಾರವಾಗಿದೆ. ರೈತರ ಬಗ್ಗೆಯೂ ಕಾಳಜಿಯೇ ಇಲ್ಲ, ಜನ ಸಾಮಾನ್ಯರಿಗೂ ಸ್ಪಂದಿಸದ ಸರ್ಕಾರವಾಗಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.