School ಮೈದಾನ ಶೈಕ್ಷಣಿಕೇತರ ಬಳಕೆಗೆ ನಿರ್ಬಂಧ ಆದೇಶಕ್ಕೆ ತೀವ್ರ ವಿರೋಧ
Team Udayavani, Jul 22, 2024, 6:30 AM IST
ಮಂಗಳೂರು: ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮೈದಾನ ಅಥವಾ ಆವರಣವನ್ನು ಯಾವುದೇ ಸಂದರ್ಭದಲ್ಲಿ ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಹಾಗೂ ಅನುಮತಿಯನ್ನೂ ನೀಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕರು (ಡಿಡಿಪಿಐ) ಹೊರಡಿಸಿರುವ ಜ್ಞಾಪನಾ ಪತ್ರ ಈಗ ಚರ್ಚೆ ಹುಟ್ಟುಹಾಕಿದೆ.
ಆದೇಶ ಹಿಂಪಡೆಯಲು ಶಾಸಕ ಕಾಮತ್ ಆಗ್ರಹ
ಈ ಬಗ್ಗೆ ಮಾಧ್ಯಮಗಳ ಜತೆಗೆ ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, “ಕೆಲವೇ ದಿನಗಳಲ್ಲಿ ಹಬ್ಬ ಹರಿದಿನಗಳು ಆರಂಭಗೊಳ್ಳಲಿದ್ದು, ಇಂಥ ಸಂದರ್ಭದಲ್ಲಿ ಹಿಂದೂ ಸಮಾಜವನ್ನು ಕೆಣಕುವ ದುರುದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದಿನಿಂದ ನಡೆದುಕೊಂಡ ಬಂದ ಸಂಪ್ರದಾಯಕ್ಕೆ ತಡೆ ಹಾಕಲು ಶಿಕ್ಷಣ ಇಲಾಖೆ ಮೂಲಕ ಯತ್ನಿಸಿರುವುದು ಅಕ್ಷಮ್ಯ. ಕೂಡಲೇ ಈ ಆದೇಶವನ್ನು ಹಿಂಪಡೆ ಯಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂಗಳ ಭಾವನೆಗೆ ಧಕ್ಕೆ: ಕುಂಪಲ
ಬಿಜೆಪಿ ದ.ಕ. ಅಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯಿಸಿ “ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನದಲ್ಲಿ ಧಾರ್ಮಿಕ ಆಚರಣೆಗೆ ನಿಷೇಧ ವಿಧಿಸಿರುವ ಸರಕಾರದ ಕ್ರಮ ಹಿಂದೂಗಳ ಹಬ್ಬಗಳನ್ನು ಗಮನದಲ್ಲಿರಿಸಿ ಮಾಡಿರುವಂಥದ್ದು. ಪದೇಪದೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿರುವುದು ಖಂಡನೀಯ. ಹಿಂದೂಗಳ ಹಬ್ಬಗಳಲ್ಲಿ ಭಾರತೀಯ ತೆಯ ಸಂಸ್ಕೃತಿಗಳು ಅಡಕವಾಗಿದೆ ಎನ್ನುವುದನ್ನು ಶಿಕ್ಷಣ ಇಲಾಖೆ ಅರಿಯಬೇಕು. ಸರಕಾರ ತತ್‌ಕ್ಷಣ ಈ ಸುತ್ತೋಲೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.