UAE; ಪ್ರತಿಭಟನೆಗಿಳಿದ ಹಲವು ಬಾಂಗ್ಲಾದೇಶೀಯರಿಗೆ ಕಠಿನ ಶಿಕ್ಷೆ ವಿಧಿಸಿದ ಯುಎಇ
Team Udayavani, Jul 22, 2024, 6:09 PM IST
ದುಬೈ: ಯುಎಇ ಯಲ್ಲಿ ಬಾಂಗ್ಲಾದೇಶದ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಬೀದಿಗಿಳಿದ ಹತ್ತಕ್ಕೂ ಹೆಚ್ಚು ಮಂದಿ ಬಾಂಗ್ಲಾ ಪ್ರಜೆಗಳಿಗೆ ಕಠಿನ ಶಿಕ್ಷೆ ವಿಧಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾನೂನು ವಿರೋಧಿಸಿ ಹಿಂಸಾಚಾರ ಭುಗಿಲೆದ್ದ ವೇಳೆಯಲ್ಲೇ ಪ್ರತಿಭಟನೆ ನಡೆಸುವ ದುಸ್ಸಾಹಸ ನಡೆಸಿ ಜೈಲು ಪಾಲಾಗಿದ್ದಾರೆ.ಅಬುಧಾಬಿ ಫೆಡರಲ್ ಮೇಲ್ಮನವಿ ನ್ಯಾಯಾಲಯವು 53 ಬಾಂಗ್ಲಾದೇಶಿ ಪ್ರಜೆಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇನ್ನೊಬ್ಬ ಬಾಂಗ್ಲಾಪ್ರಜೆಗೆ 11 ವರ್ಷಗಳ ಶಿಕ್ಷೆಯನ್ನು ವಿಧಿಸಿದೆ. ಮೂವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಎಮಿರೇಟ್ಸ್ ಸುದ್ದಿ ಸಂಸ್ಥೆ WAM ತಿಳಿಸಿದೆ. ಜೈಲು ಶಿಕ್ಷೆಯನ್ನು ಅನುಸರಿಸಿ ಬಾಂಗ್ಲಾದೇಶೀಯರನ್ನು ಯುಎಇಯಿಂದ ಗಡಿಪಾರು ಮಾಡಲು ನ್ಯಾಯಾಲಯ ಆದೇಶಿಸಿದೆ.
ಬಾಂಗ್ಲಾದೇಶದ ಪ್ರಜೆಗಳು ಯುಎಇಯ ಮೂರನೇ ಅತಿದೊಡ್ಡ ವಲಸಿಗ ಸಮುದಾಯವಾಗಿದ್ದಾರೆ. ಹೆಚ್ಚಿನವರು ಕಡಿಮೆ ಸಂಬಳದ ಕಾರ್ಮಿಕರಾಗಿದ್ದು ದುಡಿದು ತಮ್ಮ ಕುಟುಂಬಗಳಿಗೆ ಹಣವನ್ನು ಮನೆಗೆ ಕಳುಹಿಸಿಕೊಡುತ್ತಾರೆ. ಎಮಿರೇಟ್ಸ್‌ನ ಒಟ್ಟಾರೆ 9.2 ಮಿಲಿಯನ್‌ಗಿಂತಲೂ ಹೆಚ್ಚಿನ ಜನಸಂಖ್ಯೆಯು ಕೇವಲ 10 ಪ್ರತಿಶತ ಮೂಲ ನಿವಾಸಿಗಳು.
ಏಳು ಶೇಖ್‌ಡಮ್‌ಗಳ ಒಕ್ಕೂಟವಾದ ಯುಎಇಯಲ್ಲಿ ರಾಜಕೀಯ ಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಕಾನೂನು ವಾಕ್ ಸ್ವಾತಂತ್ರ್ಯವನ್ನು ತೀವ್ರವಾಗಿ ನಿರ್ಬಂಧಿಸುತ್ತವೆ. ಬಹುತೇಕ ಎಲ್ಲಾ ಪ್ರಮುಖ ಸ್ಥಳೀಯ ಮಾಧ್ಯಮಗಳು ಸರ್ಕಾರಿ ಸ್ವಾಮ್ಯದ ಅಥವಾ ರಾಜ್ಯ-ಸಂಯೋಜಿತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.