MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು
Team Udayavani, Jul 22, 2024, 6:55 PM IST
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಎಂಎಲ್ ಸಿ ಡಾ.ಸೂರಜ್ ರೇವಣ್ಣ ಅವರಿಗೆ ಸೋಮವಾರ ಜಾಮೀನು ಸಿಕ್ಕಿದೆ.
ಜನ ಪ್ರತಿನಿಧಿಗಳ ವಿಚಾರಣೆಯ ವಿಶೇಷ ನ್ಯಾಯಾಲಯ 27 ವರ್ಷದ ಯುವಕ ಸಲ್ಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 23 ರಂದು ಬಂಧಿತರಾಗಿದ್ದ ಸೂರಜ್ ರೇವಣ್ಣ ಅವರಿಗೆ 2 ಲಕ್ಷ ರೂ ವೈಯಕ್ತಿಕ ಬಾಂಡ್ ಮೇಲೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
“ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒದಗಿಸಬೇಕು ಮತ್ತು ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆಯದೆ ರಾಜ್ಯವನ್ನು ತೊರೆಯಬಾರದು. ಅರ್ಜಿದಾರರು ಯಾವುದೇ ರೀತಿಯಲ್ಲಿ ಸಂತ್ರಸ್ತನನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಅರ್ಜಿದಾರರು ತಿಂಗಳ ಪ್ರತಿ ಎರಡನೇ ಭಾನುವಾರದಂದು ತನಿಖಾಧಿಕಾರಿ (IO) ಮುಂದೆ ಹಾಜರಾಗಬೇಕು. ಆರು ತಿಂಗಳ ಅವಧಿಗೆ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಅಥವಾ ಆರೋಪಪಟ್ಟಿ ಸಲ್ಲಿಸುವವರೆಗೆ ಅವರ ಹಾಜರಾಗಬೇಕು ”ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.