Jammu-Kashmir; ಜೈಶ್ನಿಂದ ಭಾರತ ವಿರೋಧಿ ವಿಡಿಯೋ: ಫಾರ್ವರ್ಡ್ ಮಾಡದಂತೆ ಎಚ್ಚರಿಕೆ!
Team Udayavani, Jul 22, 2024, 9:22 PM IST
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾಪಡೆಗಳ ವಿರುದ್ಧ ಜನರ ಮನಸ್ಸಲ್ಲಿ ದ್ವೇಷವನ್ನು ಹುಟ್ಟಿಸಲು ಹಾಗೂ ರಾಷ್ಟ್ರ ವಿರೋಧಿ ಕೃತ್ಯಗಳಿಗೆ ಪ್ರೇರೇಪಿಸುವಂಥ ವಿಡಿಯೋವೊಂದನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿದೆ.
ಈ ವಿಡಿಯೋವನ್ನು ಯಾರಿಗೂ ಫಾರ್ವರ್ಡ್ ಮಾಡದಂತೆ, ಹಂಚದಂತೆ ಕಣಿವೆ ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ವಿಡಿಯೋವನ್ನು ಶೇರ್ ಮಾಡಿದರೆ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅನ್ವಯ ದೂರು ದಾಖಲಿಸುವ ಸಾಧ್ಯತೆಗಳ ಬಗ್ಗೆಯೂ ಎಚ್ಚರಿಸಿದ್ದಾರೆ.
ಜೈಶ್ ಉಗ್ರರು ಬಿಡುಗಡೆಗೊಳಿಸಿರುವ ವಿಡಿಯೋ 55 ಸೆಕೆಂಡ್ನದ್ದಾಗಿದ್ದು, ಬಾಲಿವುಡ್ ಸಿನಿಮಾ ಫ್ಯಾಂಟಮ್ನ ಪೋಸ್ಟರ್ ಅನ್ನು ಅಳವಡಿಸಿಕೊಂಡು ವಿಡಿಯೋ ಹರಿಬಿಡಲಾಗಿದೆ. ಅದರಲ್ಲಿ ಸೂಕ್ಷ್ಮ ಮನಸ್ಸಿಗರನ್ನು ದೇಶ ವಿರೋಧಿ ಕೃತ್ಯಕ್ಕೆ ಸೆಳೆಯುವ ಅಂಶಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.