Government ಮಾಂಟೆಸ್ಸರಿ ಆರಂಭ; ವಿಶೇಷಗಳೇನು?
Team Udayavani, Jul 23, 2024, 6:30 AM IST
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅಂಗನವಾಡಿ ಗಳ ಅಸ್ತಿತ್ವವನ್ನು ಯಾರಿಗೂ ಬದಿಗೆ ಸರಿಸಲು ಸಾಧ್ಯವಿಲ್ಲ. ಕಾಲಕ್ಕೆ ತಕ್ಕಂತೆ ಅಂಗನವಾಡಿ ಗಳನ್ನು ಉನ್ನತ ಸ್ತರಕ್ಕೇರಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕೆಲಸಕ್ಕೆ ಸರಕಾರ ಮುಂದಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ತಿಳಿಸಿದರು.
ದೇಶದ ಮೊದಲ ಸರ ಕಾರಿ ಮಾಂಟೆಸ್ಸರಿ ತರಗತಿಗೆ ಬೆಂಗಳೂರಿನ ಪಟ್ಟೆಗಾರ ಪಾಳ್ಯದಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತ ನಾಡಿದರು.
ಮೊದಲ ಹಂತದಲ್ಲಿ ಬೆಂಗಳೂರಿನ 250, ರಾಜ್ಯದ ಉಳಿದ ಭಾಗಗಳಲ್ಲಿ 5 ಸಾವಿರ ಅಂಗನವಾಡಿಗಳಲ್ಲಿ ಸರಕಾರಿ ಮಾಂಟೆಸ್ಸರಿ ಆರಂಭಿಸಲಾಗುತ್ತದೆ ಎಂದರು.
ಅಂಗನವಾಡಿಗಳಲ್ಲೇ ಪ್ರಾರಂಭ
ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಆರಂಭಿಸುವ ಯೋಜನೆ ಇತ್ತು. ಅದಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಕ್ಷೇಪವಿತ್ತು. ಅವರ ಒತ್ತಡದಿಂದಾಗಿಯೇ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಇಂದಿರಾ ಗಾಂಧಿ ಅವರು 49 ವರ್ಷಗಳ ಹಿಂದೆ ಮಕ್ಕಳಿಗೆ ಪೌಷ್ಟಿಕ ಆಹಾರ, ಆಟದ ಜತೆಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ದೇಶದಲ್ಲಿ ಮೊದಲ ಬಾರಿಗೆ ಮೈಸೂರಿನ ಟಿ. ನರಸೀಪುರದಲ್ಲಿ ಅಂಗನವಾಡಿಯನ್ನು ಪ್ರಾರಂಭಿಸಿದ್ದರು. ಅದೇ ಇತಿಹಾಸ ಮರುಕಳಿಸುತ್ತಿದೆ ಎಂದು ಹೇಳಿದರು.
ಸುಮಾರು 5 ದಶಕಗಳ ಕಾಲ ಚಾಲ್ತಿಯಲ್ಲಿದ್ದ ಅಂಗನವಾಡಿಗೆ ಈಗ ಸರಕಾರಿ ಮಾಂಟೆಸ್ಸರಿ ಎಂದು ಮರುನಾಮಕರಣ ಮಾಡಲಾಗಿದೆ. ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಸದುದ್ದೇಶದಿಂದ ಸರಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ ಎಂದರು.
ಕಳಪೆ ಆಹಾರ ಪೂರೈಕೆಯಾದರೆ ಅಮಾನತು
ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಆಯಾಯ ಜಿಲ್ಲೆಗಳ ಡಿಡಿ, ಸಿಡಿಪಿಒಗಳನ್ನು ಅಮಾನತು ಮಾಡಲಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ನಮ್ಮ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಇದಕ್ಕೆ ತಕ್ಕಂತೆ ನಿಮ್ಮ ಕೌಶಲ ಹೆಚ್ಚಿಸಿಕೊಂಡು, ಗುಣಮಟ್ಟದ ಶಿಕ್ಷಣ ನೀಡಲು ಸನ್ನದ್ದರಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅಂಗನವಾಡಿ ಕಾರ್ಯಕರ್ತರಿಗೆ ಸಲಹೆ ನೀಡಿದರು.
ವಿಶೇಷಗಳೇನು?
ಮಕ್ಕಳಿಗೆ ಒಂದು ಜತೆ ಸಮವಸ್ತ್ರ, ಬ್ಯಾಗ್, ಪೆನ್ಸಿಲ್ ಬಾಕ್ಸ್ ಕೊಡಲಾಗುತ್ತದೆ
ಮುಂದಿನ ಶಿಕ್ಷಣಕ್ಕೆ ನೆರವಾಗಲು ಯುಕೆಜಿ ಮುಗಿದ ಕೂಡಲೇ ಟಿ.ಸಿ. ವಿತರಣೆ
ಪಿಯು, ಪದವಿ, ತರಬೇತಾದ ಕಾರ್ಯಕರ್ತೆಯರ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.