Land: ಕುಮ್ಕಿ ಜಮೀನು ಲೀಸ್‌ಗೆ ನೀಡಲು ಪರಿಶೀಲನೆ: ಸಚಿವ ಕೃಷ್ಣ ಬೈರೇಗೌಡ
Team Udayavani, Jul 23, 2024, 6:20 AM IST
ಬೆಂಗಳೂರು: ಅನುಭೋಗಿಸುತ್ತಿರುವವರ ಹೆಸರಿಗೇ ಕುಮ್ಕಿ ಜಮೀನನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ. ಆದರೆ “ಲೀಸ್’ಗೆ ನೀಡಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.
ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ವಿ. ಸುನಿಲ್ ಕುಮಾರ್ ವಿಷಯ ಪ್ರಸ್ತಾವಿಸಿ, ಈಗಾಗಲೇ ಕುಮ್ಕಿ ಜಮೀನುಗಳಲ್ಲಿ ವಿಶೇಷವಾಗಿ ಕರಾವಳಿ ಭಾಗದಲ್ಲಿನ ಜನ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತಹವರಿಗೆ ಆ ಜಮೀನುಗಳನ್ನು ಮಂಜೂರು ಮಾಡಿಕೊಡಲು ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಮೀನಿಗೆ ಹೊಂದಿಕೊಂಡ ಅರಣ್ಯ ಪ್ರದೇಶದ ಜಾಗದಲ್ಲಿ ಉಪ ಉತ್ಪನ್ನಗಳನ್ನು ಪಡೆಯಲು ಹಕ್ಕು ಇದೆಯೇ ಹೊರತು ಆ ಜಾಗವನ್ನು ಮಂಜೂರು ಮಾಡಲು ನಿಯಮದಲ್ಲಿ ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಲೀಸ್‌ಗೆ ನೀಡಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.