Government Grant; ಕಂಬಳ ಅನುದಾನ: ನಿಯೋಗದಿಂದ ಸಿಎಂ ಭೇಟಿ
Team Udayavani, Jul 23, 2024, 1:46 AM IST
ಪಡುಬಿದ್ರಿ: ಅವಿಭಜಿತ ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಕಂಬಳಕ್ಕೂ ಸರಕಾರವು ಹಿಂದೆ ನೀಡುತ್ತಿದ್ದ ತಲಾ 5 ಲಕ್ಷ ರೂ. ಅನುದಾನವನ್ನು ಈ ವರ್ಷವೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ್‌ಶೆಟ್ಟಿ ಬೆಳಪು ನೇತೃತ್ವದ ನಿಯೋಗವು ಜು. 22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿತು. ನಿಯೋಗದಲ್ಲಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ’ ಸೋಜಾ, ಪುತ್ತೂರು ಶಾಸಕ ಅಶೋಕ್ ರೈ ಮುಂತಾದವರಿದ್ದರು.
ಪ್ರಸಕ್ತ ವರ್ಷದಲ್ಲಿ ಪಿಲಿಕುಳದಲ್ಲಿ ಸರಕಾರವೇ ದ. ಕ. ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಕಂಬಳವನ್ನು ಆಯೋಜಿಸಿ, ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಾಲ್ಕು ದಿನಗಳ ಜಾನಪದ ಹಾಗೂ ಗ್ರಾಮೀಣ ಕ್ರೀಡೋತ್ಸವವನ್ನು ನಡೆಸುವಂತೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಲಹೆ ನೀಡಿದರು.
ಸಚಿವರಿಗೂ ಮನವಿ
ಇದೇ ವೇಳೆ ಸ್ಪೀಕರ್ ಯು. ಟಿ. ಖಾದರ್ ಅವರು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಅವರನ್ನು ತನ್ನ ಕಚೇರಿಗೆ ಕರೆಸಿಕೊಂಡು ಶೀಘ್ರದಲ್ಲೇ ಕಂಬಳದ ಅನುದಾನ ಬಿಡುಗಡೆ ಮಾಡುವಂತೆ ಸೂಚಿಸಿದರು.
ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚಾರು ಕಲ್ಕುಡೆ ಲೋಕೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ಪಿ. ಆರ್. ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷರಾದ ನವೀನ್‌ಚಂದ್ರ ಆಳ್ವ, ಪ್ರಶಾಂತ್ ಕಾಜವ, ಮುನಿಯಾಲು ಉದಯ ಕುಮಾರ್ ಶೆಟ್ಟಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.