Bengaluru: 7 ತಿಂಗಳಲ್ಲಿ 8362 ಫ್ಲೆಕ್ಸ್‌ ತೆರವು


Team Udayavani, Jul 23, 2024, 11:12 AM IST

Bengaluru: 7 ತಿಂಗಳಲ್ಲಿ 8362 ಫ್ಲೆಕ್ಸ್‌ ತೆರವು

ಬೆಂಗಳೂರು: ಅನಧಿಕೃತ ಫ್ಲೆಕ್ಸ್‌ ಮತ್ತು ಬ್ಯಾನರ್‌ ತೆರವು ಕಾರ್ಯಾಚರಣೆ ಆರಂಭಿಸಿರುವ ಬಿಬಿಎಂಪಿ ಈ ವರ್ಷದಲ್ಲಿ(7 ತಿಂಗಳ ಅವಧಿಯಲ್ಲಿ) 8362ಕ್ಕೂ ಅಧಿಕ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಿದೆ. ಜತೆಗೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ 267 ದೂರುಗಳನ್ನು ದಾಖಲಿಸಿದೆ. ಜೂನ್‌ ತಿಂಗಳ ಆರಂಭದಿಂದ ಈವರೆಗೂ 1.03 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಜಾಹೀರಾತು ವಿಭಾಗದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅನಧಿಕೃತವಾಗಿ ಜಾಹೀರಾತುಗಳನ್ನು ಅಳವಡಿಸುವುದರಿಂದ ನಾಗರಿಕರಿಗೆ ಸಾಕಷ್ಟು ಅನಾನುಕೂಲವಾಗಲಿದೆ. ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದರಿಂದ ಪ್ರಾಣಿಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಈ ಸಂಬಂಧ ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದ ಪ್ರಮುಖ ರಸ್ತೆಗಳ ಬದಿ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯಗಳ ಫ್ಲೆಕ್ಸ್‌ಗಳನ್ನು ಹೆಚ್ಚು ಅಳವಡಿಸಲಾಗುತ್ತಿದೆ. ಯಾವುದೇ ಶುಭಾಶಯಗಳ ಕುರಿತ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಅಳವಡಿಸದಂತೆ ಪಾಲಿಕೆಯು ನಾಗರಿಕರಲ್ಲಿ ಮನವಿ ಮಾಡಿದೆ. ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಜಂಕ್ಷನ್‌ಗಳು, ಮೇಲುಸೇತುವೆಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್‌, ಬ್ಯಾನರ್‌ ಅಳವಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅನಧಿಕೃತ ಜಾಹೀರಾತುಗಳ ತೆರವು ಕಾರ್ಯಾಚರಣೆಯಲ್ಲಿ ಪೊಲೀಸ್‌ ಅಧಿಕಾರಿಗಳು ಸಹ ಪಾಲಿಕೆಯ ಜೊತೆ ಕೈ ಜೋಡಿಸಿದ್ದು ಸಹಕಾರ ನೀಡುತ್ತಿದ್ದಾರೆ.  ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರಿಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸ್‌ಆ್ಯಪ್‌ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವಿಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

 

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.