Budget 2024; ಬಿಹಾರ, ಆಂಧ್ರಕ್ಕೆ ಸಿಂಹಪಾಲು ಸಿಕ್ಕಿದ್ದು ಹೇಗೆ?


Team Udayavani, Jul 24, 2024, 6:35 AM IST

How did Bihar and Andhra get the major share in budget 2024

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಅನುದಾನದಲ್ಲಿ ಅಗ್ರಸ್ಥಾನ ಸಿಕ್ಕಿದೆ.

ಕೇಂದ್ರದ ಎನ್‌ಡಿಎ ಸರ್ಕಾರದ ಪ್ರಮುಖ ಪಿಲ್ಲರ್‌ಗಳು ಎಂದೇ ಬಿಂಬಿತವಾದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಮೋದಿ 3.0 ಸರ್ಕಾರಕ್ಕೆ ಕಾರಣೀಭೂತವಾದವು. ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಕ್ಕೆ ಕುಸಿದಾಗ ತಲಾ 16 ಮತ್ತು 12 ಜನ ಲೋಕಸಭಾ ಸದಸ್ಯರನ್ನು ಹೊಂದಿರುವ ಈ ಪಕ್ಷಗಳು ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹೆಗಲಾದವು. ಇದನ್ನೇ ಅಸ್ತ್ರವಾಗಿಟ್ಟುಕೊಂಡ ಈ ಎರಡು ಪಕ್ಷಗಳು ಈಗ ಕೇಂದ್ರ ಬಜೆಟ್‌ನಲ್ಲಿ ಸಾಕಷ್ಟು ಅನುದಾನ ಪಡೆಯುವ ಮೂಲಕ ಗೆಲುವಿನ ನಗೆ ಬೀರಿವೆ.

ಆರಂಭದಲ್ಲಿ ಕೇಂದ್ರ ಸಂಪುಟದಲ್ಲಿ ಪ್ರಮುಖ ಖಾತೆಗಳು, ಸ್ಪೀಕರ್‌ ಪೋಸ್ಟ್‌, ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಪಡೆಯಲು ಈ ಎರಡೂ ಪಕ್ಷಗಳು ಪಟ್ಟು ಹಾಕಲಿವೆ ಎಂದು ಊಹಿಸಲಾಗಿತ್ತು. ಆದರೆ ವಿಶೇಷ ಸ್ಥಾನಮಾನದ ಬದಲು “ವಿಶೇಷ ಸಹಾಯ’ ಪಡೆಯುವಲ್ಲಿ ಟಿಡಿಪಿ ಮತ್ತು ಜೆಡಿಯು ಯಶಸ್ವಿಯಾಗಿವೆ. ನಿರ್ಮಲಾ ಸೀತಾರಾಮನ್‌ ಅವರು ಆಂಧ್ರಕ್ಕೆ ವಿಶೇಷ ಯೋಜನೆಗಳನ್ನು ಪ್ರಕಟಿಸುತ್ತಿದ್ದಂತೆ ಟಿಡಿಪಿ ಸದಸ್ಯರು ಥಂಬ್‌ ಎತ್ತಿ ಗೆಲುವಿನ ನಗೆ ಸೂಸಿದರು.

ಬಿಹಾರಕ್ಕೆ ಸಿಕ್ಕಿದ್ದೇನು?

ಬಿಹಾರಕ್ಕೆ ವಿಶೇಷ ಅನುದಾನಗಳನ್ನು ನೀಡಲಾಗಿದ್ದು ಮೂಲಭೂತ ಸೌಕರ್ಯದ ಅಭಿವೃದ್ಧಿಗಾಗಿ ಒಟ್ಟು 26,000 ಕೋಟಿ ರೂ. ನೀಡಲಾಗಿದೆ. ಇದರ ಅಡಿಯಲ್ಲಿ ಬಿಹಾರದ ಹಲವು ಪ್ರಮುಖ ರಸ್ತೆ ಮಾರ್ಗಗಳ ಅಭಿವೃದ್ಧಿಗಾಗಿ ಅನುದಾನ ನೀಡಲಾಗಿದೆ. ಇದು ಪಾಟ್ನಾ-ಪೂರ್ನಿಯಾ ಎಕ್ಸ್‌ಪ್ರೆಸ್‌ ವೇ, ಬಕ್ಸಾರ್‌-ಬಗಲ್ಪುರ ಎಕ್ಸ್‌ಪ್ರೆಸ್‌ ವೇ, ಬೋಧಗಯಾ-ರಾಜಗೀರ್‌-ವೈಶಾಲಿ-ದರ್ಬಾಂಗ ರಸ್ತೆ ಜತೆಗೆ ಬಕ್ಸಾರ್‌ನಲ್ಲಿ ಗಂಗಾ ನದಿಗೆ ದ್ವಿಪಥ ಸೇತುವೆ ನಿರ್ಮಾಣದ ಯೋಜನೆಯನ್ನು ಒಳಗೊಂಡಿದೆ. ಪ್ರವಾಹದಿಂದ ನಲುಗುತ್ತಿರುವ ಪೂರ್ವ ರಾಜ್ಯಕ್ಕೆ ನೆರೆ ನಿರ್ವಹಣೆಗಾಗಿ 11,500 ಕೋಟಿ ರೂ. ಅನುದಾನ ನೀಡಲಾಗಿದೆ.

ವಿದ್ಯುತ್‌ಗಾಗಿ 21 ಸಾವಿರ ಕೋಟಿ ರೂ.:  ಬಿಹಾರದಲ್ಲಿ ವಿದ್ಯುತ್‌ ಸ್ಥಾವರಕ್ಕಾಗಿ 21,400 ಕೋಟಿ ರೂ. ಅನುದಾನ ಘೋಷಣೆಯಾಗಿದ್ದು, ಪೀರ್‌ಪೈಂತಿಯಲ್ಲಿ 2400 ಮೆಗಾ ವ್ಯಾಟ್‌ನ ವಿದ್ಯುತ್‌ ಸ್ಥಾವರವನ್ನು ನಿರ್ಮಿಸಲಾಗುವುದು. ಜತೆಗೆ ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಕ್ರೀಡಾ ಮೂಲಸೌಕರ್ಯಕ್ಕೂ ಒತ್ತು ನೀಡಲಾಗಿದೆ.

ಬಿಹಾರ ಪ್ರವಾಸೋದ್ಯಮಕ್ಕೆ ಒತ್ತು: ಬಿಹಾರದಲ್ಲಿ ಜಾಗತಿಕ ಪ್ರವಾಸೋದ್ಯಮ ವೃದ್ಧಿಯಾಗುವ ಸಲುವಾಗಿ ಇಲ್ಲಿನ ಪುರಾತನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮನ್ನಣೆ ನೀಡಲಾಗಿದೆ. ಕಾಶಿ ವಿಶ್ವನಾಥ ಕಾರಿಡಾರ್‌ ರೀತಿಯಲ್ಲಿಯೇ ಬೋಧಗಯಾದಲ್ಲಿರುವ ಮಹಾಬೋಧಿ ದೇವಾಲಯದಲ್ಲೂ ವಿಶ್ವ ದರ್ಜೆಯ ಕಾರಿಡಾರ್‌ ನಿರ್ಮಿಸಲು ಅನುದಾನ ಘೋಷಣೆಯಾಗಿದೆ. ಭಾರತದ ಪ್ರಾಚೀನ ವಿಶ್ವವಿದ್ಯಾಯಲವಾದ ನಳಂದಾವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.  ಇದರ ಜತೆಗೆ ನಳಂದ-ರಾಜಗೀರ್‌ ಕಾರಿಡಾರ್‌ ಅಡಿ ರಾಜ್‌ಗೀರ್‌ ಅಥವಾ “ಪುರಾತನ ರಾಜಗೃಹ’ದ ಸರ್ವತೋಮುಖ ಬೆಳವಣಿಗೆಗಾಗಿ ಒತ್ತು ನೀಡಲಾಗಿದೆ.

“ವಿಕಸಿತ ಭಾರತ’ ಸಾಧನೆಗಾಗಿ ಪೂರ್ವೋದಯ ಯೋಜನೆಯನ್ನು ಪರಿಚಯಿಸಿದ್ದು, ಇದರ ಅಡಿಯಲ್ಲಿ ಪೂರ್ವ ರಾಜ್ಯಗಳಾದ ಬಿಹಾರ, ಜಾರ್ಖಂಡ್‌, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಆಂಧ್ರ ಪ್ರದೇಶಗಳ ಮೂಕಸೌಕರ್ಯಕ್ಕಾಗಿ ವಿಶೇಷ ಅನುದಾನ ನೀಡಲಾಗುತ್ತಿದೆ. ಇದಲ್ಲದೇ ಬಿಹಾರದ ಸರ್ವತೋಮುಖ ಅಭಿವೃದ್ಧಿಗಾಗಿ ಬಾಹ್ಯ ಸಹಾಯದ ಘೋಷಣೆಯಾಗಿದ್ದು, ಬಂಡವಾಳ ಹೂಡಿಕೆಗಳನ್ನು ಬೆಂಬಲಿಸುವ ಸಲುವಾಗಿ ಹೆಚ್ಚುವರಿ ಆರ್ಥಿಕ ಸಹಾಯ ಒದಗಿಸಲಾಗುವುದು.

ಆತ್ಮನಿರ್ಭರ ಬಿಹಾರ ನಿರ್ಮಾಣ

ಬಿಹಾರಕ್ಕೆ ನೀಡಿರುವ ಕೊಡುಗೆಗಳನ್ನು ಸ್ವಾಗತಿಸಿರುವ ಆಡಳಿತಾರೂಡ ಜೆಡಿಯು, ರಾಜ್ಯವನ್ನು ಆತ್ಮನಿರ್ಭರಗೊಳಿಸುವಲ್ಲಿ ಈ ಯೋಜನೆಗಳು ಮಹತ್ವದ ಹೆಜ್ಜೆಯಾಗಿವೆ ಎಂದಿದೆ. ಬಿಹಾರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 26,000 ಕೋಟಿ ರೂ. ಹಾಗೂ ಪ್ರವಾಹಪೀಡಿತ ಪ್ರದೇಶಗಳ ನಿರ್ವಹಣೆಗಾಗಿ 11,500 ಕೋಟಿ ರೂ. ನೀಡುವ ಮೂಲಕ ವಿಶೇಷ ಆರ್ಥಿಕ ನೆರವು ನೀಡಲಾಗಿದೆ ಎಂದು ಉಲ್ಲೇಖೀಸಿದೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.