Union Budget 2024: ಗಯಾ, ಬೋಧ್‌ಗಯಾದಲ್ಲಿ ಕಾಶಿ ರೀತಿ ಕಾರಿಡಾರ್
Team Udayavani, Jul 23, 2024, 9:52 PM IST
ಹೊಸದಿಲ್ಲಿ: ಬಿಹಾರದ ಗಯಾದಲ್ಲಿರುವ ವಿಷ್ಣುಪಾದ ದೇವಾಲಯ ಕಾರಿಡಾರ್ ಮತ್ತು ಬೋದ್‌ಗಯಾದ ಮಹಾಬೋಧಿ ದೇವಾಲಯ ಕಾರಿಡಾರ್‌ನನ್ನು ವಿಶ್ವದಜೆರ್ಯ ಯಾತ್ರಿ ಮತ್ತು ಪ್ರವಾಸಿ ಆಗಿ ಅಭಿವೃದ್ಧಿ ಮಾಡಲಾಗುತ್ತದೆ. ಈ ಕ್ಷೇತ್ರಗಳನ್ನು ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ವಿಷ್ಣುಪಾದ ದೇವಾಲಯ ಅತ್ಯಂತ ಪ್ರಾಚೀನ ಹಿಂದು ದೇವಾಲಯವಾಗಿದ್ದ ಫಾಲ್ಗು ನದಿ ತೀರದಿಲ್ಲಿದೆ. ಅದೇ ರೀತಿ ಮಹಾಬೋಧಿ ದೇವಾಲಯ ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ಎರಡು ದೇವಾಲಯಗಳನ್ನು ಕಾಶಿ ವಿಶ್ವನಾಥ ಕಾರಿಡಾರ್ ಮಾದರಿ ಅಭಿವೃದ್ಧಿಪಡಿಸಲಾಗುತ್ತದೆ.
ರಾಜಗಿರ್, ನಳಂದ
ಅಭಿವೃದ್ಧಿಗೆ ಯೋಜನೆ
ಬಿಹಾರದ ರಾಜಗಿರ್, ಪ್ರಾಚೀನ ವಿಶ್ವವಿದ್ಯಾಲಯ ನಳಂದ ಅಭಿವೃದ್ಧಿಗೂ ಕೇಂದ್ರ ಸರ್ಕಾರ ಯೋಜನೆ ಪ್ರಕಟಿಸಿದೆ. ರಾಜಗಿರ್ ಹಿಂದೂ, ಬೌದ್ಧ, ಜೈನರ ಧಾರ್ಮಿಕ ಕೇಂದ್ರವಾಗಿದೆ. ಇಲ್ಲಿ 20ನೇ ತೀರ್ಥಂಕರ ಮುನಿಸುವ್ರತ ದೇಗುಲ ಮತ್ತು ಸಪ್ತರ್ಷಿ ಬ್ರಹ್ಮ ಕುಂಡ ಪುರಾತನವಾಗಿದೆ. ರಾಜಗಿರ್ ಧಾರ್ಮಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು.
ನಳಂದ ವಿಶ್ವವಿದ್ಯಾಲಯದ ವೈಭವವನ್ನು ಪುನರ್ ಪ್ರತಿಷ್ಠಾಪಿಸುವ ಜತೆಗೆ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಚಿಂತಿಸಿದೆ ಎಂದು ವಿತ್ತ ಸಚಿವೆ ತಿಳಿಸಿದರು. ಜತೆಗೆ ಒಡಿಶಾವನ್ನು ರಮಣೀಯ ಸುಂದರ ಮಂದಿರ, ಸ್ಮಾರಕಗಳು, ವನ್ಯಜೀವಿ ಅಭಯಾರಣ್ಯ ಮತ್ತು ಪ್ರಾಚೀನ ಕಡಲತೀರಗಳು ಪ್ರವಾಸೋದ್ಯಮ ತಾಣವನ್ನಾಗಿ ಮಾಡಿದೆ. ಒಡಿಶಾದ ಅಭಿವೃದ್ಧಿಗೂ ಕೇಂದ್ರ ಸರ್ಕಾರ ನೆರವು ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.