Income Tax; ಮುಂದಿನ ವರ್ಷ ಹಳೇ ತೆರಿಗೆ ಪದ್ದತಿ ರದ್ದು?
Team Udayavani, Jul 24, 2024, 5:59 AM IST
ಹೊಸದಿಲ್ಲಿ: ಈ ಬಾರಿಯ ಬಜೆಟ್ನಲ್ಲಿ ಹಳೆ ತೆರಿಗೆ ಪದ್ಧತಿಯ ಬಗ್ಗೆ ಯಾವುದೇ ವಿಷಯ ಪ್ರಸ್ತಾಪಿಸದ ಕಾರಣ, ಮುಂದಿನ ವರ್ಷದಿಂದ ಈ ತೆರಿಗೆ ಪದ್ಧತಿಯನ್ನು ರದ್ದು ಮಾಡಲಾಗುತ್ತದೆ ಎನ್ನಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಳೇ ತೆರಿಗೆ ಪದ್ಧತಿಯನ್ನು ರದ್ದು ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಬಜೆಟ್ ಮಂಡನೆಯ ಬಳಿಕ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿ ಸಿದ ನಿರ್ಮಲಾ ಸೀತಾರಾಮನ್, ನಾವು ತೆರಿಗೆ ಪದ್ಧತಿಯನ್ನು ಸರಳೀಕರಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಹಳೇ ತೆರಿಗೆ ಪದ್ಧತಿ ಯನ್ನು ರದ್ದು ಮಾಡುವ ಯಾವುದೇ ನಿರ್ಧಾರವನ್ನು ನಾವು ಕೈಗೊಂಡಿಲ್ಲ. ಆದರೆ ಅದು ಅಂತಿಮ ಹಂತದಲ್ಲಿದೆ ಎಂದು ಹೇಳಿದರು.
ಬಜೆಟ್ ಮಂಡನೆಯ ಸಮಯದಲ್ಲಿ ಹಳೇ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆಯನ್ನು ಜಾರಿ ಮಾಡಿಲ್ಲ. 2020ರಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಜಾರಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.