ತನಿಕೋಡಿ ಗೇಟ್ ಮೂಲಕ ಎಸ್.ಕೆ. ಬಾರ್ಡರ್; ಭಾರೀ ವಾಹನಗಳ ಸಂಚಾರ ನಿಷೇಧ: ಡಿ.ಸಿ
Team Udayavani, Jul 24, 2024, 7:23 AM IST
ಉಡುಪಿ: ರಾ.ಹೆ. 169ರ ಮಾಳದಿಂದ ತನಿಕೋಡಿ ಗೇಟ್ ಮೂಲಕ ಎಸ್.ಕೆ. ಬಾರ್ಡರ್‌ವರೆಗೆ ಸುಮಾರು 30 ಕಿ.ಮೀ. ವ್ಯಾಪ್ತಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ.
ಈ ಮಾರ್ಗದ ಕೊರ್ಕನಹಳ್ಳ, ಗುಲ್ಗುಂಜಿ ಮನೆ ಸಮೀಪದ ಸೇತುವೆ ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಘನ ವಾಹನ ಸಂಚಾರ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿ ಈ ರಸ್ತೆಯಲ್ಲಿ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು ಸಹ ಸಂಚಾರ ಮಾಡುವುದರಿಂದ ತನಿಕೋಡ್ ಗೇಟ್‌ನಿಂದ ಎಸ್.ಕೆ. ಬಾರ್ಡರ್‌ವರೆಗೆ ಅಧಿಕ ಭಾರದ ಸರಕು ಸಾಗಣಿಕೆ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶಿಸಲಾಗಿದೆ.
ಬದಲಿ ಮಾರ್ಗದ ವಿವರ
ಚಿಕ್ಕಮಗಳೂರಿನಿಂದ ಬರುವ ಭಾರೀ ವಾಹನಗಳು ಬಾಳೆ ಹೊನ್ನೂರು- ಮಾಗುಂಡಿ- ಕಳಸ- ಕುದುರೆಮುಖ-ಎಸ್.ಕೆ. ಬಾರ್ಡರ್ ಮಾರ್ಗವಾಗಿ ಹಾಗೂ ನರಸಿಂಹರಾಜಪುರ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ-ಜಯಪುರ- ಬಾಳೆಹೊಳೆ-ಕಳಸ-ಕುದುರೆಮುಖ-ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಡಿಸಿ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.