Yuva Nidhi Scheme: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
Team Udayavani, Jul 24, 2024, 7:32 AM IST
ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
2022-23ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ 3,000 ರೂ., ಡಿಪ್ಲೊಮಾ ಪಡೆದ ನಿರುದ್ಯೋಗಿಗಳಿಗೆ 1,500 ರೂ. ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತೀ ತಿಂಗಳ 25ನೇ ತಾರೀಕಿನೊಳಗೆ ಆನ್‌ಲೈನ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಪ್ರತೀ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಮಾಹಿತಿಗೆ ರಜತಾದ್ರಿಯ ಜಿಲ್ಲಾ ಉದ್ಯೋಗಾಧಿಕಾರಿ ಕಚೇರಿಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.