Linganamakki ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ… ತೀರ ಪ್ರದೇಶದ ಜನರಿಗೆ ಎಚ್ಚರಿಕೆ
ಜಲಾಶಯದಿಂದ ಯಾವುದೇ ಕ್ಷಣದಲ್ಲಿ ಹೆಚ್ಚುವರಿ ನೀರು ಹೊರ ಬಿಡುವ ಸೂಚನೆ
Team Udayavani, Jul 24, 2024, 2:30 PM IST
ಶಿವಮೊಗ್ಗ: ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಶರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೇರುತ್ತಿದ್ದು ಇದರ ಪರಿಣಾಮ ಶರಾವತಿ ನದಿ ಪಾತ್ರದ ಜನರಿಗೆ ಹಾಗೂ ಡ್ಯಾಂ ಜಲಾನಯನ ಪ್ರದೇಶದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಹೊರಡಿಸಲಾಗಿದೆ.
ಗರಿಷ್ಠ ಮಟ್ಟ 1,819 ಅಡಿ ಇರುವ ಲಿಂಗನಮಕ್ಕಿ ಜಲಾಶಯದಲ್ಲಿ ಈಗಾಗಲೇ ನೀರಿನ ಮಟ್ಟ 1801 ಅಡಿಗೆ ತಲುಪಿದ್ದು ಯಾವುದೇ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿದಿವ ಸಾಧ್ಯತೆ ಇದೆ ಎನ್ನಲಾಗಿದ್ದು ಈಗಾಗಲೇ 60 ಸಾವಿರ ಕ್ಯೂಸೆಕ್ ಗಿಂತಲೂ ಹೆಚ್ಚಾಗಿರುವ ಡ್ಯಾಂ ಒಳಹರಿವು, ಮಳೆ ಮುಂದುವರೆದಲ್ಲಿ ಡ್ಯಾಂ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುವುದರಿಂದ ಆಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಲ್ಲದೆ ನದಿ ಪಾತ್ರದಲ್ಲಿ ವಾಸಿಸುವ ಜನರು ತಮ್ಮ ಜಾನುವಾರು, ಸರಂಜಾಮಿನೊಂದಿಗೆ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಗೌರಿ ಲಂಕೇಶ್, ಕಲಬುರ್ಗಿ ಹತ್ಯೆ: ಇಬ್ಬರು ಆರೋಪಿಗಳಿಗೆ 6 ವರ್ಷ ಬಳಿಕ ಜಾಮೀನು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.