Fraud Case ಇನ್ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ 3.50 ಲಕ್ಷ ರೂ. ವಂಚನೆ
Team Udayavani, Jul 24, 2024, 11:41 PM IST
ಪುತ್ತೂರು: ಪಾರ್ಟ್ ಟೈಮ್ ಕೆಲಸ ತೆಗೆಸಿಕೊಡುವುದಾಗಿ ಹೇಳಿ ಇನ್ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ ಬಳಿಕ 3.50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ಮಡ್ಯಳಮಜಲು ನಿವಾಸಿ ಕುಶಾಲಪ್ಪ ಗೌಡ ಅವರ ಪುತ್ರಿ ಆಶಾ ಅವರು ದೂರುದಾರರು. ತನ್ನ ಇನ್ಸ್ಟಾಗ್ರಾಂ ಖಾತೆಗೆ ಪಾರ್ಟ್ ಟೈಮ್ ಜಾಬ್ನ ಜಾಹೀರಾತು ಬಂದಿದ್ದು, ಇದನ್ನು ಸಂಪರ್ಕಿಸಿದಾಗ ಟಾರ್ಗೆಟ್ ಕಾರ್ಪೊàರೇಶನ್ ಇಂಡಿಯಾ ಕಂಪೆನಿಯಲ್ಲಿ ಪಾರ್ಟ್ ಟೈಮ್ ಜಾಬ್ ವರ್ಕ್ ಹೋಂ ನೀಡುವುದಾಗಿ ವಾಟ್ಸಪ್ಗೆ ಬಂದಿರುವ ಸಂದೇಶದ ಲಿಂಕ್ ಅನ್ನು ಒತ್ತಿದಾಗ ಪ್ರತೀದಿನ ಟಾರ್ಗೆಟ್ ಟಾಸ್ಕ್ ಪೂರ್ಣಗೊಳಿಸಲು ಅಪರಿಚಿತ ವ್ಯಕ್ತಿಗಳು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಹಣವನ್ನು ಹಂತ-ಹಂತವಾಗಿ ವರ್ಗಾವಣೆ ಮಾಡಿದ್ದಾರೆ.
ಹೀಗೆ ಒಟ್ಟು 3,50,596 ರೂ. ಅನ್ನು ಹಣ ವರ್ಗಾವಣೆ ಮಾಡಿದ ಬಳಿಕ ಅವರಿಗೆ ತಾನು ಮೋಸ ಹೋದ ಅರಿವಾಗಿದೆ. ಸೆನ್ ಪೊಲೀಸರಿಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.