Rashtrapati Bhavan: ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ಮತ್ತು ಅಶೋಕ ಹಾಲ್ಗೆ ನೂತನ ಹೆಸರು
Team Udayavani, Jul 25, 2024, 3:17 PM IST
ನವದೆಹಲಿ: ರಾಷ್ಟ್ರಪತಿ ಭವನದಲ್ಲಿರುವ ಎರಡು ಪ್ರಮುಖ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ ಹಾಲ್ ಹೆಸರನ್ನು ಬದಲಾಯಿಸಲಾಗಿದೆ.
ಅದರಂತೆ ಇನ್ನು ಮುಂದೆ ದರ್ಬಾರ್ ಹಾಲ್ ಅನ್ನು ‘ಗಣತಂತ್ರ ಮಂಟಪ’ ಎಂದೂ ಅಶೋಕ ಹಾಲ್ ಅನ್ನು ‘ಅಶೋಕ ಮಂಟಪ’ ಎಂದೂ ಮರುನಾಮಕರಣ ಮಾಡಲಾಗಿದೆ. ಹೆಸರು ಬದಲಾವಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಗುರುವಾರ (ಜುಲೈ 24) ರಾಷ್ಟ್ರಪತಿ ಭವನ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದ್ದು. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಅನೇಕ ಪ್ರಮುಖ ಕಟ್ಟಡಗಳ ಮತ್ತು ರಸ್ತೆಗಳ ಹೆಸರುಗಳನ್ನು ಸಹ ಮರುನಾಮಕರಣ ಮಾಡಲಾಗಿದೆ ಎನ್ನಲಾಗಿದೆ.
ರಾಷ್ಟ್ರೀಯ ಪ್ರಶಸ್ತಿ ಪ್ರಧಾನದಂತಹ ಪ್ರಮುಖ ಸಮಾರಂಭಗಳು ಮತ್ತು ಕಾರ್ಯಕ್ರಮಗಳನ್ನು ‘ದರ್ಬಾರ್ ಹಾಲ್’ನಲ್ಲಿ ಆಯೋಜಿಸಲಾಗುತ್ತದೆ. ದರ್ಬಾರ್ ಎಂಬ ಪದವು ಭಾರತೀಯ ಆಡಳಿತಗಾರರು ಮತ್ತು ಬ್ರಿಟಿಷರ ನ್ಯಾಯಾಲಯಗಳು ಮತ್ತು ಸಭೆಗಳಿಗೆ ಸಂಬಂಧಿಸಿದೆ, ಅಲ್ಲಿ ಅವರು ತಮ್ಮ ಕಾರ್ಯಗಳನ್ನು ಆಯೋಜಿಸುತ್ತಿದ್ದರು. ಭಾರತ ಗಣರಾಜ್ಯವಾದ ನಂತರ ತನ್ನ ಪ್ರಸ್ತುತತೆಯನ್ನು ಕಳೆದುಕೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಗಣರಾಜ್ಯದ ಪರಿಕಲ್ಪನೆಯು ಪ್ರಾಚೀನ ಕಾಲದಿಂದಲೂ ಭಾರತೀಯ ಸಮಾಜದಲ್ಲಿ ಆಳವಾಗಿ ಬೇರೂರಿದೆ, ಆದ್ದರಿಂದ ದರ್ಬಾರ್ ಹಾಲ್‌ನ ಹೆಸರನ್ನು ‘ಗಣತಂತ್ರ ಮಂಟಪ’ ಎಂದು ಹೆಸರು ಸಾಕಷ್ಟು ಸೂಕ್ತವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: Mohammed Shami; ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ! ಸ್ನೇಹಿತ ಹೇಳಿದ್ದೇನು?
President Droupadi Murmu renames two of the important halls of Rashtrapati Bhavan – namely, ‘Durbar Hall’ and ‘Ashok Hall’ – as ‘Ganatantra Mandap’ and ‘Ashok Mandap’ respectively: Rashtrapati Bhavan pic.twitter.com/2q6F5ZdVaq
— ANI (@ANI) July 25, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.