Tamil Nadu: ಹೃದಯಾಘಾತಗೊಂಡರೂ ಶಾಲಾ ಮಕ್ಕಳ ಜೀವ ಉಳಿಸಿ ಬಸ್ಸಿನಲ್ಲೇ ಪ್ರಾಣ ಬಿಟ್ಟ ಚಾಲಕ
Team Udayavani, Jul 26, 2024, 12:36 PM IST
ತಮಿಳುನಾಡು: ಬಸ್ ಚಾಲನೆ ಮಾಡುತ್ತಿರುವ ವೇಳೆಯೇ ಚಾಲಕ ಹೃದಯಾಘಾತಕ್ಕೆ ಒಳಗಾಗಿದ್ದರೂ ಬಸ್ಸಿನಲ್ಲಿದ್ದ ಶಾಲಾ ಮಕ್ಕಳ ಜೀವ ಉಳಿಸಿ ಕೊನೆಗೆ ಬಸ್ಸಿನಲ್ಲೇ ಚಾಲಕ ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ಗುರುವಾರ ಸಂಜೆ ನಡೆದಿದೆ.
ತಿರುಪುರ್ ಜಿಲ್ಲೆಯ ಗಂಗೇಯಂ ನಿವಾಸಿಯಾದ ಮಲಯಪ್ಪನ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.
ಏನಿದು ಘಟನೆ:
ಮಲಯಪ್ಪನ್ ಅವರು ವೆಲ್ಲಕೋಯಿಲ್‌ನಲ್ಲಿರುವ ಖಾಸಗಿ ಶಾಲೆಯ ಬಸ್ಸಿನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಅದರಂತೆ ಗುರುವಾರ ಸಂಜೆ ಮಕ್ಕಳನ್ನು ಮನೆಗೆ ಬಿಡಲು ಹೊರಟಿದ್ದಾರೆ ಈ ವೇಳೆ ಬಸ್ಸು ವೆಲ್ಲಕೋಯಿಲ್-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ಚಾಲಕನಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ, ಕೂಡಲೇ ಎಚ್ಚೆತ್ತ ಚಾಲಕ ಮಲಯಪ್ಪನ್ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಬಳಿಕ ಬಸ್ಸಿನ ಸೀಟ್ ನಲ್ಲಿ ಕುಳಿತಲ್ಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಆ ಬಳಿಕ ಅಲ್ಲಿನ ಸ್ಥಳೀಯರು ಬಸ್ ಚಾಲಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು ಯಾವುದೇ ಪ್ರಯೋಜನವಾಗಲಿಲ್ಲ, ಪರಿಶೀಲಿಸಿದ ವೈದ್ಯರು ಮಲಯಪ್ಪನ್ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸಾವಿನ ದವಡೆಯಲ್ಲೂ ಮಲಯಪ್ಪನ್ ಅವರು ಶಾಲಾ ಬಸ್ಸಿನಲ್ಲಿದ್ದ ಮಕ್ಕಳ ಜೀವ ಉಳಿಸುವಲ್ಲಿ ಸಮಯ ಪ್ರಜ್ಞೆ ಮೆರೆದಿರುವುದಕ್ಕೆ ಸಾರ್ವಜನಿಕರು ಸೇರಿದಂತೆ ಮಕ್ಕಳ ಪೋಷಕರು ಶ್ಲಾಘಿಸಿದ್ದಾರೆ, ಅಷ್ಟು ಮಾತ್ರವಲ್ಲದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಅಗಲಿದ ಮಲಯಪ್ಪನ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಸಾವಿನ ಕೊನೆ ಕ್ಷಣದಲ್ಲೂ ಮಕ್ಕಳ ಬಗ್ಗೆ ಆಲೋಚಿಸಿ ಅವರ ರಕ್ಷಣೆ ಮಾಡಿದ ಮಲಯಪ್ಪನ್ ಕಾರ್ಯ ಶ್ಲಾಘನೀಯ ಎಂದು ಹೇಳಿದ್ದಾರೆ.
இறக்கும் தருவாயிலும் இளம் பிஞ்சுகளின் உயிர்காத்த திரு. மலையப்பன் அவர்களது மறைவுக்கு ஆழ்ந்த இரங்கலைத் தெரிவித்துக் கொள்கிறேன்.
அவரது மனிதநேயமிக்க செயலால் புகழுருவில் அவர் வாழ்வார்! https://t.co/TLSZfV6Vez
— M.K.Stalin (@mkstalin) July 25, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.