G. Parameshwara ನಿಗಮ, ಮಂಡಳಿಗಳ ನಿರ್ದೇಶಕರ ನೇಮಕಕ್ಕೆ ಮಾರ್ಗಸೂಚಿ ಅಂತಿಮ
Team Udayavani, Jul 27, 2024, 12:21 AM IST
ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರನ್ನು ನೇಮಿಸುವ ಸಂಬಂಧ ಮಾರ್ಗ ಸೂಚಿಯೊಂದನ್ನು ಸಿದ್ಧಪಡಿಸಿ ಬಹುತೇಕ ಅಂತಿಮ ಗೊಳಿಸಲಾಗಿದೆ.
ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು ಶುಕ್ರವಾರ ಸಭೆ ಸೇರಿ ರಾಜ್ಯದ 75ಕ್ಕೂ ಹೆಚ್ಚು ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ 1,400 ಕ್ಕೂ ಹೆಚ್ಚು ನಿರ್ದೇಶಕರ ನೇಮಕಕ್ಕೆ ಸಂಬಂಧಪಟ್ಟಂತೆ ಅನುಸರಿಸಬೇಕಾದ ಮಾನದಂಡಗಳನ್ನು ಸಮಾಲೋಚಿಸಿ ಪ್ರಮುಖವಾಗಿ 5 ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
– ರಾಜ್ಯದ ಎಲ್ಲ ಜಿಲ್ಲೆ ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಪ್ರಾತಿನಿಧ್ಯ ಕೊಡಬೇಕು.
– ಪರಿಶಿಷ್ಟರು, ಹಿಂದುಳಿದ ವರ್ಗ, ಮಹಿಳೆಯರು ಸೇರಿದಂತೆ ಸಾಮಾನ್ಯ ವರ್ಗದವರಿಗೂ ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕು
-ಸಾರ್ವಜನಿಕ ಜೀವನದಲ್ಲಿದ್ದು ಪಕ್ಷ ಸಂಘಟನೆಗೆ ಶ್ರಮಿಸಿದ ಹಿರಿಯರು ಜತೆಗೆ ಇದುವರೆಗೂ ಅವಕಾಶ ಸಿಗದವರನ್ನು ಗುರುತಿಸುವುದು
-ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸುಗಳನ್ನು ಪರಿಗಣಿಸುವುದು
– ನಿಗಮ, ಮಂಡಳಿಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಸಾಮಾನ್ಯ ತಿಳಿವಳಿಕೆ ಇರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.