![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 27, 2024, 7:00 PM IST
“ಜೀನಿಯಸ್ ಮುತ್ತ’- ಹೀಗೊಂದು ಶೀರ್ಷಿಕೆಯ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ ಜೀನಿಯಸ್ ಮುತ್ತ.
ಈ ಚಿತ್ರವನ್ನು ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣ ಮಾಡಿದ್ದು, ಈ ಚಿತ್ರದಲ್ಲಿ ಜೀನಿಯಸ್ ಮುತ್ತನಾಗಿ ಮಾಸ್ಟರ್ ಶ್ರೇಯಸ್ ಜೈ ಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ.
ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕಿ ನಾಗಿಣಿ ಭರಣ, “ನನಗೆ ಹಲವು ವರ್ಷಗಳಿಂದ ನಿರ್ದೇಶನ ಮಾಡು ವಂತೆ ಎಲ್ಲರೂ ಹೇಳುತ್ತಿದ್ದರು. ಅದು ಆಗಿರಲಿಲ್ಲ. ಆದರೆ ಲತಾ ಅವರು ತಮ್ಮ ಮಗನನ್ನು ಚಿತ್ರರಂಗಕ್ಕೆ ಪ್ರವೇಶಿಸಬೇಕೆಂದುಕೊಂಡಿದ್ದೇನೆ. ಆ ಚಿತ್ರವನ್ನು ನೀವೇ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಸಿದ್ಧ ಮಾಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಮಾಸ್ಟರ್ ಶ್ರೇಯಸ್, ವಿಜಯ ರಾಘವೇಂದ್ರ, ಟಿ.ಎಸ್.ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಒಂದು ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ’ ಎಂದರು.
ನಾಗಿಣಿ ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಿಂದಿನಿಂದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ ಎನ್ನುವುದು ಟಿ.ಎಸ್ ನಾಗಾಭರಣ ಅವರ ಮಾತು.
ಚಿತ್ರದಲ್ಲಿ ಜೀನಿಯಸ್ ಮುತ್ತನಾಗಿ ಕಾಣಿಸಿಕೊಂಡಿರುವ ಶ್ರೇಯಸ್, “ನಾನುಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ಜೀನಿಯಸ್ ಮುತ್ತನಾಗಿ ಅಭಿನಯಿಸಿದ್ದೇನೆ. ಅವಕಾಶ ನೀಡಿದ ಅಮ್ಮನಿಗೆ ಹಾಗೂ ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ’ ಎಂದರು.
ನಟ ವಿಜಯ ರಾಘವೇಂದ್ರ ಕೂಡ ಮಾತನಾಡಿದರು. “ನಾಗಿಣಿ ಭರಣ ಅವರು ನನಗೆ ಹತ್ತು ವರ್ಷಗಳ ಪರಿಚಯ. ನನ್ನ ಮಗನಿಗಾಗಿ ಒಂದೊಳ್ಳೆ ಕಥೆ ಮಾಡಿ ನೀವೇ ನಿರ್ದೇಶನ ಮಾಡಬೇಕೆಂದು ನಾಗಿಣಿ ಭರಣ ಅವರ ಬಳಿ ಹೇಳಿದೆ. ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ನನಗೆ ಕಥೆ ಹೇಳಿದರು. ಚಿತ್ರ ಆರಂಭವಾಯಿತು. ಈಗ ಬಿಡುಗಡೆ ಹಂತ ತಲುಲಿದೆ’ ಎಂದರು ನಿರ್ಮಾಪಕಿ ಲತಾ ಜೈಪ್ರಕಾಶ್.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.