Theft: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳವು
Team Udayavani, Jul 27, 2024, 8:07 PM IST
ಮಂಜೇಶ್ವರ: ಮೀಂಜ ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನದಿಂದ ಜು. 26ರಂದು ರಾತ್ರಿ ಚಿನ್ನಾಭರಣ ಹಾಗು ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ ಘಟನೆ ನಡೆದಿದೆ.
ಗರ್ಭಗುಡಿಯ ಬಾಗಿಲಿನ ಬೀಗ ಮುರಿಯಲಾಗಿದ್ದು, ಅದರೊಳಗಿದ್ದ ಬೆಳ್ಳಿಯ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ. ದೇವಸ್ಥಾನದ ಕಚೇರಿಯ ಲಾಕರ್ ಮುರಿಯಲೆತ್ನಿಸಿದ್ದು, ಆದರೆ ಅದು ಸಾಧ್ಯವಾಗಲಿಲ್ಲ. ಇದೇ ವೇಳೆ ಭಕ್ತರು ಹರಕೆ ರೂಪದಲ್ಲಿ ನೀಡಿದ ಸುಮಾರು 10 ಪವನ್ ಚಿನ್ನಾಭರಣವನ್ನು ಸಣ್ಣ ಪೆಟ್ಟಿಗೆಯಿಂದ ದೋಚಿದ್ದಾರೆ.
ಜು. 26ರಂದು ರಾತ್ರಿ ಪೂಜೆಯ ಬಳಿಕ ದೇವಸ್ಥಾನಕ್ಕೆ ಬಾಗಿಲು ಮುಚ್ಚಲಾಗಿತ್ತು. ಶುಕ್ರವಾರ ಬೆಳಗ್ಗೆ ಸಿಬಂದಿ ಬಾಗಿಲು ತೆರೆದು ಒಳಗೆ ಪ್ರವೇಶಿಸಿದಾಗ ಕಳವು ನಡೆದಿರುವುದು ತಿಳಿದು ಬಂತು. ಸುತ್ತು ಗೋಪುರದ ಬಾಗಿಲನ್ನು ಕಳ್ಳರು ತೆರೆಯಲಿಲ್ಲ. ಬದಲಾಗಿ ಸುತ್ತು ಗೋಪುರದ ಛಾವಣಿಗೆ ಹತ್ತಿ ಕಳ್ಳರು ಒಳಗಿಳಿದು ಕಳವು ನಡೆಸಿ ಪರಾರಿಯಾಗಿರಬಹುದೆಂದು ಶಂಕಿಸಲಾಗಿದೆ.
ದೇವಸ್ಥಾನದ ಸಿ.ಸಿ. ಕೆಮರಾ ಪರಿಶೀಲಿಸಿದಾಗ ಅದರಲ್ಲಿ ಗುರುವಾರ ರಾತ್ರಿ 11.30ರ ವೇಳೆ ಕೋಟು ಹಾಗು ಕೈಗಳಿಗೆ ಗ್ಲೌಸ್ ಧರಿಸಿದ ವ್ಯಕ್ತಿಯೋರ್ವ ಕಳವು ನಡೆಸುವ ದೃಶ್ಯ ಕಂಡು ಬಂದಿದೆ. ಈ ದೃಶ್ಯದ ಆಧಾರದಲ್ಲಿ ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರು ವಾಹನದಲ್ಲಿ ಬಂದಿರಬಹುದೆಂದು ಶಂಕಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪರಿಸರದ ಸಿ.ಸಿ. ಕೆಮರಾಗಳನ್ನು ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಹಚ್ಚುವ ಕ್ರಮ ಕೈಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.