Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ
Team Udayavani, Jul 27, 2024, 8:10 PM IST
ಕಾಸರಗೋಡು: ಇನ್‌ಸ್ಟಾಗ್ರಾಂನಲ್ಲಿ ಪರಿಚಯಗೊಂಡು ಹನಿಟ್ರಾಪ್‌ನಲ್ಲಿ ಸಿಲುಕಿಸಿ ಯುವಕನಿಂದ ಚಿನ್ನ ಮತ್ತು ಹಣ ಎಗರಿಸಿದ ಪ್ರಕರಣದ ಆರೋಪಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಮೇಲ್ಪರಂಬ ಪೊಲೀಸರು ಉಡುಪಿಯ ವಸತಿಗೃಹವೊಂದರಿಂದ ಬಂಧಿಸಿದ್ದಾರೆ.
ಚೆಮ್ನಾಡು ಕೊಂಬನಡ್ಕದ ಶ್ರುತಿ ಚಂದ್ರಶೇಖರನ್ (35)ಳನ್ನು ಬಂಧಿಸಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಪೊಯಿನಾಚಿಯ 30 ವರ್ಷದ ಯುವಕನೋರ್ವನನ್ನು ಪರಿಚಯ ಮಾಡಿಕೊಂಡು ಬಳಿಕ ಆತನನ್ನು ಹನಿಟ್ರಾಪ್‌ನಲ್ಲಿ ಸಿಲುಕಿಸಿ ಆತನಿಂದ ಒಂದು ಲಕ್ಷ ರೂ. ನಗದು ಹಾಗು ಒಂದು ಪವನ್ ಚಿನ್ನದ ಸರವನ್ನು ಎಗರಿಸಿದ ಬಗ್ಗೆ ದೂರು ನೀಡಿದ್ದನು. ಅದರಂತೆ ಶ್ರುತಿ ಚಂದ್ರಶೇಖರನ್ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.
ತಾನು ಐಎಸ್‌ಆರ್‌ಒ ಅಧಿಕಾರಿಯೆಂದು ನಂಬಿಸಿ ಅದರ ಸೋಗಿನಲ್ಲಿ ಆಕೆ ಪೊಯಿನಾಚಿಯ ಯುವಕನನ್ನು ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದಳು. ನಕಲಿ ಗುರುತು ಪತ್ರ ತಯಾರಿಸಿದ ಬಗ್ಗೆಯೂ ಈಕೆಯ ವಿರುದ್ಧ ಕೇಸು ದಾಖಲಿಸಲಾಗಿದೆ. ಈಕೆಯ ವಿರುದ್ಧ ಕಾಸರಗೋಡು, ಅಂಬಲತ್ತರ, ಕಣ್ಣೂರು ಮತ್ತು ಕೊçಯಿಲಾಂಡಿ ಪೊಲೀಸ್ ಠಾಣೆಗಳಲ್ಲಿ ಹಲವು ಕೇಸುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.