![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jul 27, 2024, 8:13 PM IST
ಉಪ್ಪಿನಂಗಡಿ: ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹ ರಕ್ಷಕ ದಳದ ಪ್ರವಾಹ ರಕ್ಷಣ ತಂಡ ಪ್ರಯಾಸದಿಂದ ರಕ್ಷಣೆ ಮಾಡಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮೊಗ್ರು ಗ್ರಾಮದ ಪುಂಡುಪಿಲದಲ್ಲಿ ತೋಡಿಗೆ ಬಿದ್ದ ದನ ನೆರೆ ನೀರಿನಲ್ಲಿ ಕೊಚ್ಚಿ ಕೊಂಡು ನೇತ್ರಾವತಿ ನದಿಗೆ ಸೇರಿತ್ತು. ಹಳೆಗೇಟು ಬಳಿಯ ದಡ್ಡು ಎಂಬಲ್ಲಿ ಇದನ್ನು ಕಂಡ ಚಂದಪ್ಪ ಪ್ರವಾಹ ರಕ್ಷಣ ತಂಡಕ್ಕೆ ಮಾಹಿತಿ ನೀಡಿದರು. ತತ್‌ಕ್ಷಣವೇ ಕಾರ್ಯಪ್ರವೃತವಾದ ಈ ತಂಡ ರಬ್ಬರ್ ದೋಣಿಯ ಮೂಲಕ ಕಾರ್ಯಾಚರಣೆ ನಡೆಸಿ, ದನವನ್ನು ರಕ್ಷಿಸಿ ದೇವಾಲಯದ ಬಳಿ ದಡಕ್ಕೆ ತಂದು ಕಟ್ಟಿ ಹಾಕಿದರು. ಗೃಹ ರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಅವರ ನೇತೃತ್ವದಲ್ಲಿ ಈ ರಕ್ಷಣಾ ಕಾರ್ಯಾಚರಣೆ ನಡೆಯಿತು.
You seem to have an Ad Blocker on.
To continue reading, please turn it off or whitelist Udayavani.