Dams Full: ಶೇ.28ರಷ್ಟು ಅಧಿಕ ಮಳೆ, ಬಹುತೇಕ ಅಣೆಕಟ್ಟುಗಳು ಭರ್ತಿ: ಸಚಿವ ಕೃಷ್ಣ ಬೈರೇಗೌಡ
Team Udayavani, Jul 28, 2024, 6:16 AM IST
ಶ್ರೀರಂಗಪಟ್ಟಣ: ರಾಜ್ಯದಲ್ಲಿ ಮಳೆ ಪ್ರಮಾಣ ಶೇ. 28ರಷ್ಟು ಹೆಚ್ಚಾಗಿದ್ದು ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರನ್ನು ಹೊರ ಬಿಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಜಲಾವೃತವಾಗಿರುವ ವೆಲ್ಲೆಸ್ಲಿ ಸೇತುವೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಯಾ ಗಿದ್ದು, 6 ಜಿಲ್ಲೆ ಗಳಲ್ಲಿ ಸಾಧಾರಣ ಮಳೆಯಾಗಿದೆ. ಹೇಮಾವತಿ ನದಿ ತುಂಬಿ ಹರಿಯುತ್ತಿದ್ದು ಜಲಾಶಯದಿಂದ ಹೆಚ್ಚುವರಿ ನೀರು ಬಿಡಲಾಗಿದೆ. ಕೆಆರ್‌ಎಸ್‌ನಿಂದ 1.20 ಲಕ್ಷ ಕ್ಯುಸೆಕ್ ನೀರು ಬಿಡಲಾಗಿದ್ದು, ತಗ್ಗು ಪ್ರದೇಶ ವಾಸಿಗಳ ಸ್ಥಳಾಂತರಕ್ಕೆ ಸೂಚಿಸಲಾಗಿದೆ.
ಕೇರಳ ವಯನಾಡಿನಲ್ಲಿ ಹೆಚ್ಚು ಮಳೆ ಯಾ ದ ಪರಿಣಾಮ ಕಬಿನಿ ಜಲಾ ಶಯ ತುಂಬಿದ್ದು, 80 ಸಾವಿರ ಕ್ಯುಸೆಕ್ ನೀರು ಹರಿಯಬಿಡಲಾಗಿದೆ. ಒಟ್ಟಾರೆಯಾಗಿ ಕೆಆರ್‌ಎಸ್ ಮತ್ತು ಕಬಿನಿಯಿಂದ 1.60 ಲಕ್ಷ ಕ್ಯುಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ ಎಂದರು.
“ಪ್ರಧಾನಿ ಕೈ ಹಿಡಿದು ಮೇಕೆದಾಟಿಗೆ ಸಹಿ ಹಾಕಿಸಿದ್ದರೆ ಕೈಮುಗಿಯುತ್ತಿದ್ದೆ’
ಹೊಳೆನರಸೀಪುರ: ನಮ್ಮ ರಾಜ್ಯದ ದೊಡ್ಡ ಯಜಮಾನರು, ಚಿಕ್ಕ ಯಜಮಾನರು ಮೊನ್ನೆ ಗುರುವಾರ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಅದೇ ವೇಳೆ ಪ್ರಧಾನಿಯ ಕೈ ಹಿಡಿದು ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತಿದ್ದರೆ ನಾವು ನಿಮಗೆ ಧನ್ಯವಾದ ಹೇಳಿ ಕೈಮುಗಿಯುತ್ತಿದ್ದೆವು.
ಯಜಮಾನ್ರೇ ನಿಮಗೆ ಕೈಮುಗಿದು ಕೇಳಿಕೊಳ್ಳುತ್ತೇನೆ, ಮೇಕೆದಾಟು ಹಾಗೂ ಕಳಸಾ ಬಂಡೂರಿ ಯೋಜನೆಗೆ ಅನುಮತಿ ಕೊಡಿಸಿ… ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದ ಪರಿ ಇದು. ಹೇಮಾವತಿ ನದಿ ನೀರಿನ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿ, ಕೇಂದ್ರದ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.