Bengaluru South; ರಾಜಕೀಯಕ್ಕಾಗಿ ರಾಮನಗರ ಹೆಸರು ಬದಲು: ನಿಖಿಲ್‌ ಕುಮಾರಸ್ವಾಮಿ

ಯಾವುದೇ ಕಾರಣಕ್ಕೂ ನಮ್ಮ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ: ಸುರೇಶ್‌ ಬಾಬು

Team Udayavani, Jul 28, 2024, 6:35 AM IST

Nikhil

ರಾಮನಗರ: ಜಿಲ್ಲೆಯ ಹೆಸರನ್ನು ಬದಲಾಯಿಸ‌ಲು ಮುಂದಾಗಿರುವ ಸರಕಾರದ ಕ್ರಮವನ್ನು ಖಂಡಿಸಿ ಜೆಡಿಎಸ್‌-ಬಿಜೆಪಿ ನಾಯಕರು ಜಂಟಿಯಾಗಿ ಹೋರಾಟ ನಡೆಸುವ ಸಂಬಂಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಜತೆ ಚರ್ಚಿಸಿ ಹೋರಾಟದ ರೂಪುರೇಷೆ  ರೂಪಿಸಲಾಗುವುದು ಎಂದು ಯುವ ಘಟಕದ ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಮನಗರ ಪ್ರಭು ಶ್ರೀರಾಮನ ದೇವರ ಪಾದಸ್ಪರ್ಶವಾಗಿರುವ ಪುಣ್ಯ ಕ್ಷೇತ್ರ. ಬ್ರ್ಯಾಂಡ್‌ ಬೆಂಗಳೂರಿನ ಹೆಸರಿನಲ್ಲಿ ರಾಜಕೀಯ ಉದ್ದೇಶಕ್ಕಾಗಿ ಜಿಲ್ಲೆ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದರು. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಿರಲಿಲ್ಲ. ಇದೀಗ ಯಾಕೆ ಬದಲಾವಣೆ ಮಾಡಲು ಮುಂದಾಗಿದ್ದಾರೆ ಎಂದು ಪ್ರಶ್ನಿಸಿದರು.

ಮಿತ್ರರ ಪಾದಯಾತ್ರೆ ಹತ್ತಿಕ್ಕಲು ಆಗಲ್ಲ: ಸುರೇಶ್‌ಬಾಬು
ಸದ‌ನದಲ್ಲಿ ಮುಡಾ, ವಾಲ್ಮೀಕಿ ನಿಗಮ ಸೇರಿದಂತೆ ವಿವಿಧ ಹಗರಣಗಳ ಬಗ್ಗೆ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಒಗ್ಗೂಡಿ ಹೋರಾಟ ನಡೆಸಿದ್ದೇವೆ. ಆದರೆ ಸದನದಲ್ಲಿ ಈ ವಿಚಾರ ಚರ್ಚೆಗೆ ಅವಕಾಶ ಸಿಗದ ಕಾರಣ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗಿದೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ತಿಳಿಸಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಜಿಲ್ಲಾ ಜೆಡಿಎಸ್‌ ಪದಾಧಿಕಾರಿಗಳು ಮತ್ತು ಪ್ರಮುಖ ಮುಖಂಡರ ಸಭೆಯಲ್ಲಿ ಮಾತನಾಡಿ, ಪಾದಯಾತ್ರೆಯ ಪೂರ್ವಭಾವಿ ಸಿದ್ಧತೆ ಬಗ್ಗೆ ಸಭೆ ಮಾಡ್ತಿದ್ದೇವೆ. ರಾಮನಗರ, ಮಂಡ್ಯ, ಮೈಸೂರು ಭಾಗಗಳಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಕಾರಣಕ್ಕೂ ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಹೇಳಿದರು.

ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ಹಗರಣಗಳಲ್ಲಿ ಮುಳುಗಿ ರಾಜ್ಯದ ಜನಜೀವನದ ಮೇಲೆ ಬೆಲೆ ಏರಿಕೆ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ, ಜೆಡಿಎಸ್‌-ಬಿಜೆಪಿ ಹೋರಾಟ ನಡೆಸಲಿದ್ದು, ಕಾರ್ಯಕರ್ತರು ಯಶಸ್ವಿಗೊಳಿಸಬೇಕು ಎಂದರು.

ತಣಿಯದ ಶಾಸಕ ಜಿಟಿಡಿ ಮುನಿಸು: ಮುಖಂಡರ ಸಭೆಗೆ ಗೈರು
ಮೈಸೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾದ ಬಳಿಕ ಪಕ್ಷದ ಜತೆ ತುಸು ಮುನಿಸಿಕೊಂಡಂತೆ ಇರುವ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರ ಸಭೆಗೆ ಗೈರು ಹಾಜರಾಗಿದ್ದರು.

ಸ್ಥಳೀಯ ಮಾಜಿ ಶಾಸಕರು, ಹಾಲಿ ಶಾಸಕರು, ಮುಖಂಡರು ಅಲ್ಲದೆ ಜಿಟಿಡಿ ಅವರ ಪುತ್ರ ಶಾಸಕ ಜಿ.ಡಿ.ಹರೀಶ್‌ಗೌಡ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಜಿಟಿಡಿ ಅವರು ಭಾಗವಹಿಸದೇ ಇರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ. ಭಾನುವಾರ ಕೇಂದ್ರದ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಮುಖಂಡರ ಸಭೆ ನಡೆಸುತ್ತಿದ್ದಾರೆ. ಅದರಲ್ಲಿ ಜಿಟಿಡಿ ಭಾಗವಹಿಸುವರೇ ಎನ್ನುವುದನ್ನು ಕಾದುನೋಡಬೇಕಾಗಿದೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.