Arrested: ನಗರದಲ್ಲಿ ನಂಬರ್ ಪ್ಲೇಟ್ ಮರೆಮಾಚಿ ವಾಹನ ಚಾಲನೆ; ಬೈಕ್ ಸವಾರನ ಬಂಧನ
Team Udayavani, Jul 28, 2024, 11:30 AM IST
ಬೆಂಗಳೂರು: ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಮರೆಮಾಚಿಕೊಂಡು ಚಲಾಯಿಸುತ್ತಿದ್ದ ಸವಾರನನ್ನು ವೈಟ್ಫೀಲ್ಡ್ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಡುಗೋಡಿಯ ಕೇಶವ (45) ಬಂಧಿತ. ಆತನಿಂದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಜು.24ರಂದು ಕಾಡುಗೋಡಿಯ ಬಸ್ ನಿಲ್ದಾಣದ ಬಳಿ ಸವಾರನೊಬ್ಬ ನೋಂದಣಿ ಸಂಖ್ಯೆ ಮರೆಮಾಚಿಕೊಂಡು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗಿದ್ದ. ಅದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಮೊಬೈಲ್ನಲ್ಲಿ ಆ ದ್ವಿಚಕ್ರ ವಾಹನದ ಫೋಟೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ನಗರ ಸಂಚಾರ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಮನವಿ ಮಾಡಿದ್ದರು. ಈ ದೂರಿನ ಮೇರೆಗೆ ಆ ದ್ವಿಚಕ್ರ ವಾಹನ ಮತ್ತು ಸವಾರನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರ ವಶಕ್ಕೆ ನೀಡಲಾಗಿದೆ.
ಈ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.