HDK Nose Bleed: ನನ್ನ ಆರೋಗ್ಯ ಸಂಪೂರ್ಣ ಹದಗೆಟ್ಟಿಲ್ಲ: ಎಚ್.ಡಿ.ಕುಮಾರಸ್ವಾಮಿ
ಕೆಲವೊಮ್ಮೆ ವಿಶ್ರಾಂತಿ ರಹಿತ, ಅಧಿಕ ಒತ್ತಡದ ಕೆಲಸದಿಂದ ಹೀಗಾಗುತ್ತದೆ: ಕೇಂದ್ರ ಸಚಿವ
Team Udayavani, Jul 28, 2024, 10:54 PM IST
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಬಿಜೆಪಿ- ಜೆಡಿಎಸ್ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ಉಂಟಾದ್ದರಿಂದ ತಕ್ಷಣವೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ.
ಜಯನಗರದ ಆಸ್ಪತ್ರೆಯಿಂದ ಬಿಡುಗಡೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ” ಅಭಿಮಾನಿಗಳು, ಕಾರ್ಯಕರ್ತರು ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ದೇವರು, ತಂದೆ, ತಾಯಿ ಆಶೀರ್ವಾದ ಇರುವವರೆಗೆ ನನಗೆ ಯಾವುದೇ ಅಪಾಯ ಆಗಲ್ಲ. ಯಾರು ಆತಂಕ ಪಡುವ ಅಗತ್ಯವಿಲ್ಲ. ಹೃದಯಕ್ಕೆ ಸಂಬಂಧಿಸಿ ಈ ವರೆಗೆ ಮೂರು ಬಾರಿ ವಾಲ್ವ್ ಮರು ಜೋಡಣೆ ಕಾರಣಕ್ಕಾಗಿ ಬ್ಲಡ್ ಥಿನ್ನರ್ ಮಾತ್ರೆ ತೆಗೆದುಕೊಳ್ಳುತ್ತಿದ್ದೇನೆ. ರಕ್ತ ಹೆಪ್ಪುಗಟ್ಟದಿರಲಿ ಎಂಬ ಕಾರಣಕ್ಕೆ ಆ ಮಾತ್ರೆ ತೆಗೆದುಕೊಳ್ಳುತ್ತಿದ್ದೇನೆ. ಕೆಲವೊಮ್ಮೆ ವಿಶ್ರಾಂತಿ ರಹಿತ, ಅಧಿಕ ಒತ್ತಡದಿಂದ ಕೆಲಸ ಮಾಡುವಾಗ ಈ ರೀತಿ ಮೂಗಿನಿಂದ ರಕ್ತ ಸೋರಿಕೆಯಾಗುವುದು ಸಹಜವಾಗಿದೆ” ಎಂದರು.
ವಿಶ್ರಾಂತಿಗೆ ಸೂಚನೆ; ಆರೋಗ್ಯ ಪೂರ್ಣ ಹದಗೆಟ್ಟಿಲ್ಲ:
“ವಿಶ್ರಾಂತಿ ರಹಿತ ಕೆಲಸ ಮಾಡಬೇಡಿ, ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಜನರ ನನಗೆ ಒಂದೊಂದು ಕ್ಷಣವೂ ಪ್ರಮುಖವಾಗಿದೆ. 92 ವರ್ಷದ ಎಚ್.ಡಿ.ದೇವೇಗೌಡರು ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡುವವರಿದ್ದಾರೆ. ಆಗ ಅಲ್ಲಿನ ಚರ್ಚೆಯಲ್ಲಿ ಭಾಗವಹಿಸಿ ಧ್ವನಿಗೂಡಿಸಬೇಕು ಎಂಬುದು ಮನಸ್ಸಿನಲ್ಲಿದೆʼ ಎಂದು ಎಚ್‌ಡಿಕೆ ಹೇಳಿದರು.
ಇದನ್ನೂ ಓದಿ:
BJP-JDS Meet: ಸುದ್ದಿಗೋಷ್ಠಿ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ !
ಪಾದಯಾತ್ರೆಗೆ ಇನ್ನೂ 1 ವಾರ ಇದೆ:
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಬೆಂಗಳೂರು -ಮೈಸೂರು ಪಾದಯಾತ್ರೆಗೆ ಇನ್ನೂ ಒಂದು ವಾರ ಇದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ರೂ ಪಾದಯಾತ್ರೆ ಮಾಡಬೇಕಿದೆ ನನಗೆ ಆರೋಗ್ಯ ಸಂಪೂರ್ಣ ಹದಗೆಟ್ಟಿಲ್ಲ ವಿಶ್ರಾಂತಿ ಸೂಚಿಸಿದರೆ ನಾನು ಗೈರು ಆದರೆ ನಿಖಿಲ್ ಕುಮಾರಸ್ವಾಮಿಯವರು ಪಕ್ಷದ ಶಾಸಕರು, ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳೊಂದಿಗೆ ಎಲ್ಲರ ಜೊತೆಗೂಡಿ ಪಕ್ಷದ ಸಂಘಟನೆಗೆ ಒತ್ತು ನೀಡುತ್ತಾರೆ. ನನಗೆ ವಿಶ್ರಾಂತಿ ಹೇಳಿದ್ರೆ ಅವರು (ನಿಖಿಲ್) ನೇತೃತ್ವದಲ್ಲಿ ಆರಂಭ ಮಾಡುತ್ತಾರೆʼ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.