JDS ಸಂಘಟನೆಗೆ ಸಮಿತಿ ರಚನೆ: ಎಚ್.ಡಿ. ಕುಮಾರಸ್ವಾಮಿ
Team Udayavani, Jul 29, 2024, 12:34 AM IST
ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ಉಪ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಡಿಎಸ್, ಸಮಿತಿಯೊಂದನ್ನು ರಚಿಸಿ ರಾಜ್ಯಾದ್ಯಂತ ಪ್ರವಾಸಕ್ಕೆ ತೀರ್ಮಾನಿಸಿದೆ.
ನಗರದ ಪಕ್ಷದ ಕಚೇರಿಯಲ್ಲಿರುವ ಜೆಪಿ ಭವನದಲ್ಲಿ ರವಿವಾರ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮುಂಬರುವ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ಪಕ್ಷ ಸಂಘಟನೆ, ಸದಸ್ಯತ್ವ ಅಭಿಯಾನ, ಪದಾಧಿಕಾರಿಗಳ ಕಾರ್ಯನಿರ್ವಹಣೆ ಸೇರಿ ವಿವಿಧ ಮಹತ್ವದ ವಿಷಯಗಳ ಬಗ್ಗೆ ಶಾಸಕರು, ಸಂಸದರು, ವಿಧಾನ ಪರಿಷತ್ತಿನ ಸದಸ್ಯರು, ಮಾಜಿ ಶಾಸಕರು ಹಾಗೂ ನಾಯಕರ ಜತೆ ಸಮಾಲೋಚನಾ ಸಭೆ ನಡೆಯಿತು. ಅಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಸಮಿತಿ ರಚನೆಯಾದ ಮೇಲೆ ಇನ್ನು 10 ದಿನಗಳ ಅನಂತರ ಆ ಸಮಿತಿಯಲ್ಲಿ ಇರುವವರು ಎಲ್ಲ ಮುಖಂಡರ ಜತೆಗೂಡಿ 31 ಜಿಲ್ಲೆ ಗಳಲ್ಲಿಯೂ ಕಾರ್ಯಕ್ರಮ ಹಾಕಿಕೊಳ್ಳಬೇಕು. ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಸೇರಿ ಎಲ್ಲ ಹಿರಿಯ-ಕಿರಿಯ ನಾಯಕರೂ ರಾಜ್ಯ ಪ್ರವಾಸ ಮಾಡಬೇಕು. ತಿಂಗಳಲ್ಲಿ ಎಲ್ಲ ಜಿಲ್ಲೆ ಗಳಲ್ಲಿಯೂ ನಾಯಕರು ಪ್ರವಾಸ ಪೂರ್ಣಗೊಳಿಸಬೇಕು. ಕಾರ್ಯಕರ್ತರ ಪಡೆ ಕಟ್ಟಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು.
ನಿರ್ಲಕ್ಷ್ಯ ಸಹಿಸಲಾಗದು
ಪಕ್ಷ ಸಂಘಟನೆ ಬಗ್ಗೆ ನಿರ್ಲಕ್ಷ್ಯ ತೋರಿದರೆ ಸಹಿಸುವ ಪ್ರಶ್ನೆಯೇ ಇಲ್ಲ. ಚುನಾವಣೆ ಬಂದಾಗ ಕಾರ್ಯಕರ್ತರ ಕೈಕಾಲು ಹಿಡಿಯುತ್ತೇವೆ. ಆಮೇಲೆ ಮತ್ತೂಂದು ಚುನಾವಣೆ ಬರುವ ತನಕ ಸಂಘಟನಾ ಕೆಲಸದ ಕಡೆ ಲಕ್ಷ್ಯ ಕೊಡುವುದಿಲ್ಲ ಎಂದರೆ ಹೇಗೆ? ಈ ಧೋರಣೆ ಸಹಿಸಲಾಗದು. ಸದಸ್ಯತ್ವ ನೋಂದಣಿ ಅಭಿಯಾನದ ಬಗ್ಗೆ ನಿರ್ಲಕ್ಷ್ಯ ಸರಿಯಲ್ಲ ಎಂದರು.
ನನ್ನ ಆರೋಗ್ಯದ ಬಗ್ಗೆ ಯಾರೂ ಆತಂಕಕ್ಕೆ ಒಳಗಾಗುವ ಆವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡುವುದು ಇಷ್ಟೇ.. ನಿಮ್ಮ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ-ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ
-ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.