Rainಉತ್ತರದಲ್ಲಿ ನಿಲ್ಲದ ನೆರೆ: 44 ಹಳ್ಳಿಗಳು ಜಲಾವೃತ; 7 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತ

100ಕ್ಕೂ ಅಧಿಕ ಗ್ರಾಮ ದ್ವೀಪ

Team Udayavani, Jul 29, 2024, 1:35 AM IST

Rainಉತ್ತರದಲ್ಲಿ ನಿಲ್ಲದ ನೆರೆ: 44 ಹಳ್ಳಿಗಳು ಜಲಾವೃತ; 7 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತ

ಹುಬ್ಬಳ್ಳಿ: ರಾಜ್ಯದಲ್ಲಿ ಮಳೆ ತಗ್ಗಿದರೂ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದ ಬೆಳಗಾವಿ ಜಿಲ್ಲೆ ಅಕ್ಷರಶಃ ಬೆಚ್ಚಿ ಬಿದ್ದಿದೆ. ಕೃಷ್ಣಾ, ಘಟಪ್ರಭಾ ಸಹಿತ ಸಪ್ತ ನದಿಗಳು ಉಕ್ಕೇರಿ ಜನರ ಜೀವನವನ್ನೇ ಅಲ್ಲೋಲ ಕಲ್ಲೋಲಗೊಳಿಸಿವೆ. 44 ಹಳ್ಳಿಗಳು ಜಲಾವೃತವಾಗಿವೆ. 7 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. 100ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿತಗೊಂಡಿವೆ.

ಕೃಷ್ಣಾ, ವೇದಗಂಗಾ, ದೂಧಗಂಗಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ಅಬ್ಬರಿಸುತ್ತಿವೆ. ಕೃಷ್ಣಾ ನದಿಗೆ 2,77,703 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದರೆ, ಘಟಪ್ರಭಾ ನದಿಯ ಒಳಹರಿವು 50 ಸಾವಿರ ಕ್ಯೂಸೆಕ್‌ ತಲುಪಿದೆ.

ಆಲಮಟ್ಟಿಯಿಂದ 3 ಲಕ್ಷ ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದ್ದು, ತೀರ ಪ್ರದೇಶದಲ್ಲಿ ಡಂಗುರ ಸಾರಲಾಗಿದೆ.

ನಾರಾಯಣಪುರ ಬಸವಸಾಗರ ಜಲಾಶಯದಿಂದ 3.20 ಲಕ್ಷ ಕ್ಯೂಸೆಕ್‌ ನೀರು ಬಿಟ್ಟಿದ್ದರಿಂದ ಲಿಂಗಸ್ಗೂರು ತಾಲೂಕಿನ 4, ರಾಯಚೂರು ತಾಲೂಕಿನ 17 ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ. 15 ಗರ್ಭಿಣಿಯರನ್ನು ನಡುಗಡ್ಡೆಯಿಂದ ಸ್ಥಳಾಂತರಿಸಲಾಗಿದೆ.

ಮಲೆನಾಡಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ತುಂಗಭದ್ರಾ ನದಿ ಹರಿವು ಏರುತ್ತಲೇ ಇದೆ. ಟಿಬಿ ಡ್ಯಾಂನಿಂದ 1.47 ಲಕ್ಷ ಕ್ಯೂಸೆಕ್‌ ನೀರು ಬಿಟ್ಟಿದ್ದರಿಂದ ಹಂಪಿಯ ಕೆಲವು ಸ್ಮಾರಕಗಳು ಮುಳುಗಡೆಯಾಗಿವೆ. ನೀರಿನ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.

ಎಲ್ಲಿ ಎಷ್ಟು ಹಾನಿ?
ಬೆಳಗಾವಿ ಜಿಲ್ಲೆ
– 38 ಹಳ್ಳಿಗಳು ಜಲಾವೃತ
– 6,160 ಮಂದಿ 427 ಕಾಳಜಿ ಕೇಂದ್ರಕ್ಕೆ
– 2,015 ಮಂದಿ ಸಂಬಂಧಿಕರ ಮನೆಗೆ
– 454 ಮನೆ ಕುಸಿತ
– 41 ಸೇತುವೆಗಳು ಮುಳುಗಡೆ
– 80ಕ್ಕೂ ಹೆಚ್ಚು ಗ್ರಾಮ ಸಂಪರ್ಕ ಕಡಿತ
– 3,243 ಹೆಕ್ಟೇರ್‌ ಕೃಷಿ ಹಾನಿ
– 1,529 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿ
ಬಾಗಲಕೋಟೆ ಜಿಲ್ಲೆ
– 6 ಗ್ರಾಮ ಮುಳುಗಡೆ
– 1,177 ಮಂದಿ ಕಾಳಜಿ ಕೇಂದ್ರಕ್ಕೆ
– 805 ಜಾನುವಾರು ರಕ್ಷಣೆ
– 44 ಮನೆ ಕುಸಿತ
– 9 ಸೇತುವೆಗಳು ಜಲಾವೃತ
– 20ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತ
– 5,701 ಹೆಕ್ಟೇರ್‌ ಬೆಳೆ ಹಾನಿ

ಟಾಪ್ ನ್ಯೂಸ್

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.