Vijayapura; ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು
ಆಕ್ರೋಶಿತ ಗ್ರಾಮಸ್ಥರು, ವಿದ್ಯಾರ್ಥಿಗಳಿಂದ ರಸ್ತೆ ಸಂಚಾರ ತಡೆದು ಪ್ರತಿಭಟನೆ
Team Udayavani, Jul 29, 2024, 8:05 PM IST
ವಿಜಯಪುರ : ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ತೀವ್ರಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ.
ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ.ಎ. ಗ್ರಾಮದ ವಿದ್ಯಾರ್ಥಿ 16 ವರ್ಷದ ಸಂದೀಪ ಗಿಡ್ಡನಗೋಳ ಮೃತ ದುರ್ದೈವಿ. ಸಂದೀಪ ಸಿಂದಗಿ ಪಟ್ಟಣದ ಎಸ್.ಜಿ. ಹೈಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಸೋಮವಾರ ಬೆಳಗ್ಗೆ ಶಾಲೆಗೆ ತೆರಳಲು ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬನ್ನಿಹಟ್ಟಿ ಗ್ರಾಮದ ಸಂದೀಪ ಬಸ್‌ನಿಂದ ಕೆಳಗೆ ಬಿದ್ದು ತೀವ್ರಗಾಯಗೊಂಡಿದ್ದ. ಬಸ್‌ನ ಹಿಂಬದಿ ಗಾಲಿಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಸಿಂದಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಘಟನೆಯ ಹಿನ್ನೆಲೆಯಲ್ಲಿ ಉದ್ರಿಕ್ತಗೊಂಡ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರಲ್ಲದೇ, ಸಾರಿಗೆ ಸಂಸ್ಥೆಯ ಸಿಂಧಗಿ ಘಟಕದ ವ್ಯವಸ್ಥಾಪಕ ಸ್ಥಳಕ್ಕೆ ಬರಬೇಕು. ಅಪಘಾತಕ್ಕೆ ಕಾರಣವಾದ ಬಸ್ ಚಾಲಕ-ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.