Parliment: ಲೋಕಸಭೆ ಸಚೇತಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ
Team Udayavani, Jul 30, 2024, 7:00 AM IST
ಉಡುಪಿ: ಬಿಜೆಪಿಯ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಿಸಿದ್ದು, ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಮಂದಿ ಸಚೇತಕರನ್ನಾಗಿ ನೇಮಿಸಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಸೋಮವಾರ (ಜುಲೈ 29) ಆದೇಶ ಹೊರಡಿಸಿದ್ದಾರೆ.
ಡಾ ಸಂಜಯ್ ಜೈಸ್ವಾಲ್ ರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರಾಗಿ ನೇಮಿಸಲಾಗಿದೆ. ಇನ್ನು ಈ 16 ಜನರ ಸಚೇತಕರ ಪೈಕಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಮೊದಲ ಬಾರಿಗೆ ಸಂಸತ್ ಸದಸ್ಯರಾಗಿದ್ದು, ಅವರನ್ನು ಸಚೇತಕರನ್ನಾಗಿ ನೇಮಿಸಿದ್ದು ವಿಶೇಷ. ಕರ್ನಾಟಕದಿಂದ ಬೇರೆ ಯಾರನ್ನೂ ನೇಮಿಸಿಲ್ಲ.
ಇನ್ನು ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟ ಶ್ರೀನಿವಾಸ್ ಪೂಜಾರಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.