Landslide:ಕೇರಳದ ವಯನಾಡಿನಲ್ಲಿ ಭೂಕುಸಿತ, 41 ಮಂದಿ ಮೃತ್ಯು,ನೂರಾರು ಮಂದಿ ಸಿಲುಕಿರುವ ಶಂಕೆ
Team Udayavani, Jul 30, 2024, 8:29 AM IST
ವಯನಾಡು: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಇಂದು (ಜು.30 ಮಂಗಳವಾರ) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿರುವುದಾಗಿ ವರದಿಯಾಗಿದೆ.
ಮಾಹಿತಿ ಪ್ರಕಾರ 400ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ, ಇದೇ ವೇಳೆ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿ 41 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದ್ದು, ಇದನ್ನು ಜಿಲ್ಲಾಡಳಿತ ಕೂಡ ದೃಢಪಡಿಸಿದೆ.
ಈಗಾಗಲೇ ಕಣ್ಣೂರಿನ ಎರಡು ರಕ್ಷಣಾ ತಂಡಗಳು ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳುತ್ತಿರುವುದಾಗಿ ವರದಿಯಾಗಿದೆ.
Landslide @wayand @kerala @vellarmala village….. Only Airlift possible. pic.twitter.com/rEH4HqOWr9
— A_j_i (@ajithannayyan) July 30, 2024
ಭೂ ಕುಸಿತದಿಂದ ಮಣ್ಣಿನಡಿ ನೂರಾರು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ, ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.