Bengaluru: ಹೊರ ರಾಜ್ಯದಿಂದ ಮಾಂಸ ಸಾಗಣೆ; ವ್ಯಾಪಾರಿಗಳಿಗೆ ಪೊಲೀಸ್ ನೋಟಿಸ್
Team Udayavani, Jul 30, 2024, 11:09 AM IST
ಬೆಂಗಳೂರು: ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ಮಾಂಸ ಸಾಗಣೆ ಪ್ರಕರಣ ಸಂಬಂಧ ಅಬ್ದುಲ್ ರಜಾಕ್ ಮತ್ತು ರಾಜಸ್ಥಾನ ಹಾಗೂ ನಗರದ ಮಾಂಸ ವ್ಯಾಪಾರಿಗಳಿಗೆ ಕಾಟನ್ ಪೇಟೆ ಪೊಲೀಸರು ಸೋಮವಾರ ನೋಟಿಸ್ ನೀಡಿದ್ದಾರೆ.
ರಾಜಸ್ಥಾನದಿಂದ ನಗರಕ್ಕೆ ರೈಲಿನಲ್ಲಿ ಮಾಂಸ ಪಾರ್ಸೆಲ್ ಕಳುಹಿಸಿದವರು ಹಾಗೂ ಆ ಮಾಂಸವನ್ನು ನಗರಕ್ಕೆ ತರಿಸಿ ಕೊಂಡ ಮಾಂಸದ ವ್ಯಾಪಾರಿ ಬಗ್ಗೆ ರೈಲ್ವೆ ಇಲಾಖೆ ಮಾಹಿತಿ ನೀಡಿತ್ತು. ಜತೆಗೆ ನಗರದ ಮಾಂಸದ ವ್ಯಾಪಾರಿಗಳ ಪರವಾಗಿ ರೈಲ್ವೆ ನಿಲ್ದಾಣದಲ್ಲಿ ಹಿಂದೂ ಕಾರ್ಯಕರ್ತರ ಜತೆ ವಾಗ್ವಾದ ನಡೆಸಿದ ಅಬ್ದುಲ್ ರಜಾಕ್ಗೂ ನೋಟಿಸ್ ಕೊಡಲಾಗುತ್ತದೆ. ರಾಜಸ್ಥಾನದ ವ್ಯಕ್ತಿಯನ್ನು ಈಗಾಗಲೇ ಫೋನ್ ಮೂಲಕ ಸಂಪರ್ಕಿಸಲಾಗಿದ್ದು, ಮೌಖೀಕವಾಗಿ ವಿಚಾರಣೆ ಹಾಜರಾ ಗುವಂತೆ ಸೂಚಿಸಲಾಗಿದೆ.
ಜತೆಗೆ ಮಂಗಳವಾರ ಆತನ ಮನೆ ವಿಳಾಸ ಮತ್ತು ವಾಟ್ಸ್ಆ್ಯಪ್ ಮೂಲಕ ನೋಟಿಸ್ ಕಳುಹಿಸಲಾಗುತ್ತದೆ. ಇನ್ನು ಸಾವಿರಾರು ಕೆ.ಜಿ.ಗಟ್ಟಲೇ ಮಾಂಸ ಒಬ್ಬ ವ್ಯಾಪಾರಿಯ ಹೆಸರಿಗೆ ಬಂದಿದ್ದು, ಆತ ನಗರದಲ್ಲಿ ಬೇರೆ ಯಾರಿಗೆ ವಿತರಣೆ ಮಾಡುತ್ತಿದ್ದ ಎಂಬ ಮಾಹಿತಿ ಪಡೆದುಕೊಂಡು ಅವರಿಗೂ ನೋಟಿಸ್ ನೀಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಪ್ರಕರಣದ ಹಿನ್ನೆಲೆ: ಜುಲೈ 26 ರಾಜಸ್ಥಾನದಿಂದ ನಗರದ ಕೆಎಸ್ಆರ್ ರೈಲು ನಿಲ್ದಾಣಕ್ಕೆ 90 ಬಾಕ್ಸ್ಗಳಲ್ಲಿ ಸುಮಾರು 4,500 ಕೆ.ಜಿ.ಮಾಂಸ ಪಾರ್ಸೆಲ್ ಬಂದಿತ್ತು. ಈ ಮಾಂಸ ನಾಯಿ ಮಾಂಸ. ಕಳಪೆ ಗುಣಮಟ್ಟದ ಮಾಂಸ. ತಿನ್ನಲು ಯೋಗ್ಯವಲ್ಲದ ಮಾಂಸ ಎಂದು ರಾಷ್ಟ್ರ ರಕ್ಷಣೆ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ಆರೋಪಿಸಿದ್ದರು. ಮಾಂಸವಿದ್ದ ಬಾಕ್ಸ್ಗಳನ್ನು ತೆರೆದು ಪರಿಶೀಲಿಸುವಂತೆ ರೈಲು ನಿಲ್ದಾಣದಲ್ಲಿ ಗಲಾಟೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.