Hiriydaka-ಗುಡೆಯಂಗಡಿ ರಾಜ್ಯ ಹೆದ್ದಾರಿ: ತುಂಬ ಗುಂಡಿ!
ಐದು ಕಿ.ಮೀ. ರಸ್ತೆಯ ಉದ್ದಕ್ಕೂ ಗುಂಡಿಗಳದೇ ಸಾಮ್ರಾಜ್ಯ; ವಾಹನಿಗರಿಗೆ ಭಾರೀ ಅಪಾಯ
Team Udayavani, Jul 30, 2024, 3:39 PM IST
ಹಿರಿಯಡಕ: ಉಡುಪಿ- ಬೈಲೂರು- ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಹಿರಿಯಡಕ- ಗುಡ್ಡೆಯಂಗಡಿ ನಡುವೆ ರಸ್ತೆಗಿಂತ ಗುಂಡಿಗಳೇ ಹೆಚ್ಚಾಗಿವೆ. ಹಿರಿಯಡಕದಿಂದ ಗುಡ್ಡೆಯಂಗಡಿವರೆಗೆ ಐದಾರು ಕಿಲೋಮೀಟರ್ ರಸ್ತೆಯಲ್ಲಿ ಬೃಹದಾಕಾರದಲ್ಲಿ ಗುಂಡಿಗಳು ಬಾಯ್ದೆರೆದುಕೊಂಡು ವಾಹನ ಸವಾರರಿಗೆ ಅಪಾಯಕಾರಿ ಯಾಗಿ ಪರಿಣಮಿಸಿದೆ.
ಕಾರ್ಕಳದಿಂದ ಮಣಿಪಾಲ, ಉಡುಪಿ ಕಡೆಗೆ ಮತ್ತು ಉಡುಪಿಯಿಂದ ಕಾರ್ಕಳ ಕಡೆಗೆ ದಿನ ನಿತ್ಯ ಸಾವಿರಾರು ವಾಹನಿಗರು ಈ ರಸ್ತೆಯನ್ನು ಬಳಸುತ್ತಿ ದ್ದಾರೆ. ಸಾಕಷ್ಟು ಮಂದಿ ಶಿಕ್ಷಣ, ಆರೋಗ್ಯ, ಸಂಬಂಧಿತ ಕಾರ್ಯಗಳಿಗಾಗಿ ನಿತ್ಯ ಸಂಚರಿಸುತ್ತಿರುತ್ತಾರೆ. ಅನೇಕರು ಬೆಳಗ್ಗೆ ಬಂದು ಸಂಜೆ ಹೋಗುವವರಿದ್ದಾರೆ. ಆದರೆ ಈ ಭಾಗದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿರುವುದು ಸಮಸ್ಯೆ ಸೃಷ್ಟಿಸಿದೆ.
ಇಲ್ಲಿ ಗುಂಡಿಗಳನ್ನು ತಪ್ಪಿಸಿಕೊಂಡು ಹೋಗಲು ಸವಾರರು ಹರಸಾಹಸ ಪಡುತ್ತಿದ್ದಾರೆ. ರಸ್ತೆ ಅವ್ಯವಸ್ಥೆ ಬಗ್ಗೆ ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಅಭಿವೃದ್ಧಿಗಾಗಿ ಹಲವು ವರ್ಷಗಳಿಂದ ಮನವಿ ಮಾಡಲಾಗಿದ್ದರೂ, ದುರಸ್ತಿ, ತೇಪೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ವ್ಯವಸ್ಥಿತ ರಸ್ತೆ ನಿರ್ಮಾಣ ಕಾರ್ಯ ನಡೆದಿಲ್ಲ. ಕೂಡಲೇ ಗುಂಡಿಗಳನ್ನು ತಾತ್ಕಾಲಿಕ ನೆಲೆಯಲ್ಲಾದರೂ ಗುಂಡಿಗಳನ್ನು ಮುಚ್ಚಿ ಮತ್ತು ಮಳೆ ಅನಂತರ ವ್ಯವಸ್ಥಿತ ರಸ್ತೆ ನಿರ್ಮಾಣ ಮಾಡಲು ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳು ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಐದು ಕಿ.ಮೀ. ಯಮಯಾತನೆ
ಹಿರಿಯಡಕ ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್‌ನಿಂದ ರಸ್ತೆ ಆರಂಭಗೊಳ್ಳುತ್ತದೆ.
ಅಲ್ಲಿಂದ ಭಜನ ಕಟ್ಟೆ, ಮಂಜೊಟ್ಟಿ, ಕೊಂಡಾಡಿ ಶಾಲೆ, ಬೂಪಾಡಿಕಲ್ಲು, ಗುಡ್ಡೆಯಂಗಡಿವರೆಗೆ ರಸ್ತೆ ತೀರಾ ದುಃಸ್ಥಿತಿಯಲ್ಲಿದೆ.
ಗುಡ್ಡೆಯಂಗಡಿ ಕಾರ್ಕಳ ಲೋಕೋಪಯೋಗಿ ಇಲಾಖೆ ಉಪವಲಯ ವ್ಯಾಪ್ತಿಯಿಂದ ಕಾರ್ಕಳವರೆಗೆ ಹೊಸ ರಸ್ತೆ ನಿರ್ಮಾಣಗೊಂಡಿದೆ.
ಹಿರಿಯಡಕದಿಂದ ಗುಡ್ಡೆಯಂಗಡಿವರೆಗೆ ರಸ್ತೆ ಹಲವು ವರ್ಷಗಳಿಂದ ಅಭಿವೃದ್ಧಿಯೇ ಕಂಡಿಲ್ಲ.
ಹಲವು ಸವಾರರು ಬಿದ್ದಿದ್ದಾರೆ.
ಗುಂಡಿಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ.
ರಸ್ತೆ ದುರವಸ್ಥೆಯಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ಘನ ಮತ್ತು ಲಘು ವಾಹನಗಳ ತಾಂತ್ರಿಕ ಸಮಸ್ಯೆ ಎದುರಿಸುತ್ತವೆ.
ಈ ರಸ್ತೆಯಲ್ಲಿ ಆ್ಯಂಬುಲೆನ್ಸ್ ಸಹ ಚಲಿಸಲು ಅಸಾಧ್ಯವಾಗಿದೆ.
ಟೆಂಡರ್ ಹಂತದಲ್ಲೇ ವರ್ಷಗಳು ಕಳೆದವು
ಪೇತ್ರಿ-ಹಿರಿಯಡಕ-ಗುಡ್ಡೆಯಂಗಡಿ 11ರಿಂದ 13 ಕಿ.ಮೀ. ವ್ಯಾಪ್ತಿ ಕಾರ್ಕಳ ಸಂಪರ್ಕ ರಸ್ತೆ ಅಭಿವೃದ್ಧಿಗೆ 3 ಕೋ.ರೂ. ಅನುದಾನ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಪಿಡಬ್ಲ್ಯುಡಿ ಇಲಾಖೆ ಎರಡು ವರ್ಷಗಳ ಹಿಂದೆ ತಿಳಿಸಿತ್ತು. ಪ್ರಸ್ತುತ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮ ಅಡಿಯಲ್ಲಿ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ! ಹೀಗೆ ಹಲವು ವರ್ಷಗಳಿಂದ ಟೆಂಡರ್ ಪ್ರಕ್ರಿಯೆಯಲ್ಲೇ ಕಾಲ ಕಳೆಯು ವಂತಾಗಿದೆ!
ದುರಸ್ತಿಗೆ ಮಳೆ ಅಡ್ಡಿ
ಹಿರಿಯಡಕ-ಗುಡ್ಡೆಯಂಗಡಿ ವ್ಯಾಪ್ತಿ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿ ರಾಜ್ಯ ಹೆದ್ದಾರಿ ನಿಗಮದಿಂದ ನಡೆಯಲಿದ್ದು, ಇದು ಟೆಂಡರ್ ಹಂತದಲ್ಲಿದೆ. ಪ್ರಸ್ತುತ ಸವಾರರಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರಸ್ತೆಗಳನ್ನು ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಂಡಿದ್ದೇವೆ. ಆಗಾಗ ಮಳೆಯಾಗುತ್ತಿರುವುದರಿಂದ ದುರಸ್ತಿಗೂ ಅಡ್ಡಿಯಾಗುತ್ತಿದೆ.
– ಸೋಮನಾಥ್, ಎಂಜಿನಿಯರ್, ಲೋಕೋಪಯೋಗಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.