Prajwal Revanna ವಿರುದ್ಧ ರಾಹುಲ್ ಗಾಂಧಿ ಆರೋಪ: ಹೈಕೋರ್ಟ್ಗೆ ಅರ್ಜಿ
Team Udayavani, Jul 31, 2024, 6:15 AM IST
ಬೆಂಗಳೂರು: ಹಲವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟೀಕಿಸುವ ಭರದಲ್ಲಿ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಮಾನ ಹಾನಿಯಾಗುವಂತೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ರಾಹುಲ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಚಿ.ನಾ.ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.
ರಾಹುಲ್ ಗಾಂಧಿ, ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.