MUDA ನನಗೆ ನಿವೇಶನ ಹಂಚಿದ್ದರೂ ಜಾಗ ನೀಡಿಲ್ಲ: ಎಚ್‌ಡಿಕೆ ತಿರುಗೇಟು
ತಲಾ 2 ಮುಖ, ನಾಲಿಗೆ, ವ್ಯಕ್ತಿತ್ವ, ಐಡಿಯಾಲಜಿ ಹೊಂದಿರುವ ಸಿದ್ದಾಲಜಿ!
Team Udayavani, Jul 31, 2024, 12:37 AM IST
ಬೆಂಗಳೂರು: 40 ವರ್ಷಗಳ ಹಿಂದೆಯೇ ಕುಮಾರಸ್ವಾಮಿ ಮುಡಾ ನಿವೇಶನ ಪಡೆದಿದ್ದಾರೆ. ಸ್ವಾಧೀನ ಪತ್ರವನ್ನೂ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿಸುಳ್ಳು ಹೇಳಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿದ್ದರಾಮಯ್ಯ ಅವರದ್ದು 2 ಮುಖ, 2 ನಾಲಿಗೆ, 2 ವ್ಯಕ್ತಿತ್ವ, 2 ಐಡಿಯಾಲಜಿಯಾಗಿದ್ದು, ಇದನ್ನು ಸಿದ್ದಾಲಜಿ ಎಂದು ವ್ಯಾಖ್ಯಾನಿಸಿದ್ದಾರೆ.
ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯನವರೇ. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಮುಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ ಇದರಲ್ಲಿ ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸ್ವಪಕ್ಷೀಯರಿಂದಲೇ ಸಿಎಂಗೆ ಶರಪಂಜರ
“ಮುಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ’ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯಕತೆ ನನಗೆ ಅರ್ಥವಾಗುತ್ತದೆ. ಪಾಪ… ನಿಮ್ಮ ಪಕ್ಷದವರೇ ನಿಮಗೆ “ಶರಪಂಜರ’ ಸೃಷ್ಟಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.