Wayanad; ನಾಳಿನ ವಯನಾಡ್ ಭೇಟಿಯನ್ನು ಮುಂದೂಡಿದ ರಾಹುಲ್, ಪ್ರಿಯಾಂಕಾ
ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ...
Team Udayavani, Jul 31, 2024, 10:37 AM IST
ಹೊಸದಿಲ್ಲಿ: ಭಾರೀ ಭೂಕುಸಿತದಿಂದ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ಕೇರಳದ ವಯನಾಡ್ ಗೆ ಸಂಸದ ರಾಹುಲ್ ಗಾಂಧಿ ಅವರು ನಿಗದಿಯಾಗಿದ್ದ ಗುರುವಾರದ ಭೇಟಿಯನ್ನು ಮುಂದೂಡಿದ್ದಾರೆ.
”ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶ ಮತ್ತು ಕುಟುಂಬದವರನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ನಾಳೆ ವಯನಾಡ್‌ಗೆ ಭೇಟಿ ನೀಡಬೇಕಿತ್ತು. ಆದರೆ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ನಾವು ಅಲ್ಲಿ ತಲುಪಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾವು ಆದಷ್ಟು ಬೇಗ ಭೇಟಿ ನೀಡುತ್ತೇವೆ ಎಂದು ನಾನು ವಯನಾಡ್ ಜನರಿಗೆ ಭರವಸೆ ನೀಡಲು ಬಯಸುತ್ತೇನೆ. ಈ ಮಧ್ಯೆ, ನಾವು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ವಯನಾಡಿನ ಜನರೊಂದಿಗೆ ಇವೆ” ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Priyanka and I were scheduled to visit Wayanad tomorrow to meet with families affected by the landslide and take stock of the situation.
However, due to incessant rains and adverse weather conditions we have been informed by authorities that we will not be able to land.
I…
— Rahul Gandhi (@RahulGandhi) July 30, 2024
ಇದನ್ನೂ ಓದಿ: Wayanad ನಲ್ಲಿ ಘೋರ ದೃಶ್ಯಗಳು: 143 ಕ್ಕೇರಿದ ಸಾವಿನ ಸಂಖ್ಯೆ
ರಾಜ್ಯಸಭೆಯ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ” ರಾಷ್ಟ್ರೀಯ ವಿಪತ್ತಾಗಿರುವ ವಯನಾಡಿನ ದುರದೃಷ್ಟಕರ ಘಟನೆ ಪರಿಸ್ಥಿತಿಯನ್ನು ನಾವೆಲ್ಲರೂ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅಲ್ಲಿಗೆ ಭೇಟಿ ನೀಡಲಿದ್ದಾರೆ. ಪಕ್ಷದ ಕಾರ್ಯಕರ್ತರು ಪುನರ್ವಸತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಪರಿಹಾರ, ವೈದ್ಯಕೀಯ ನೆರವು ಮತ್ತು ಪರಿಹಾರವನ್ನು ನೀಡುವಲ್ಲಿ ಯಾವುದೇ ರೀತಿಯಲ್ಲಿ ಕಡಿಮೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದಿಂದ ಅರೋಗ್ಯ ಸಚಿವ ಜೆಪಿ ನಡ್ಡಾ ಭರವಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಂತಾಪ
ಸಂಸತ್ತಿನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾಸಭೆಯಲ್ಲಿ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.
A moment of silence at the Central Hall, Parliament House, New Delhi, to pay respects to the lives lost in the Wayanad landslide and the three UPSC aspirants in Delhi who succumbed to flooding. pic.twitter.com/G0HpRDf3tW
— Congress (@INCIndia) July 31, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.