Tollywood: ಸಂದೀಪ್ ವಂಗಾ ಬಿಗ್ ಬಜೆಟ್ ʼಸ್ಪಿರಿಟ್ʼನಲ್ಲಿ ಪ್ರಭಾಸ್ ಡಬಲ್ ರೋಲ್?
ಚಿತ್ರದ ಬಜೆಟ್ ಎಷ್ಟು?
Team Udayavani, Jul 31, 2024, 2:27 PM IST
ಹೈದರಾಬಾದ್: ಡಾರ್ಲಿಂಗ್ ಪ್ರಭಾಸ್ (Prabhas) ʼಸಲಾರ್ʼ, ʼಕಲ್ಕಿʼ ಮೂಲಕ ಬ್ಯಾಕ್ ಟು ಬ್ಯಾಕ್ ಪ್ಯಾನ್ ಇಂಡಿಯಾ ಹಿಟ್ ಕೊಟ್ಟಿದ್ದಾರೆ.
ಈ ನಡುವೆ ಪ್ರಭಾಸ್ ತನ್ನ ಮುಂದಿನ ಪ್ರಾಜೆಕ್ಟ್ ಗಳತ್ತ ಗಮನ ಹರಿಸಿದ್ದಾರೆ. ಮುಂದೆಯೂ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅದರಲ್ಲಿ ʼರಾಜಾಸಾಬ್ʼ (Rajasaab) ಚಿತ್ರದ ತಯಾರಿ ವೇಗವಾಗಿ ನಡೆಯುತ್ತಿದೆ. ಇದಾದ ಬಳಿಕ ಅವರು ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರ ʼಸ್ಪಿರಿಟ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ʼಸ್ಪಿರಿಟ್ʼ (Spirit) ಬಿಗ್ ಬಜೆಟ್ ಸಿನಿಮಾವಾಗಿದ್ದು, 2025ರಲ್ಲಿ ಸೆಟ್ಟೇರಲಿದೆ. ಆದರೆ ಸಿನಿಮಾದ ಬಗ್ಗೆ ಹಾಗೂ ಪ್ರಭಾಸ್ ಅವರ ಪಾತ್ರದ ಬಗ್ಗೆ ಈಗಿನಿಂದಲೇ ಸಖತ್ ಕ್ರೇಜ್ ಹುಟ್ಟಿದೆ.
ʼಸ್ಪಿರಿಟ್ʼ ನಲ್ಲಿ ಪ್ರಭಾಸ್ ಡಬಲ್ ರೋಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕ ಹಾಗೂ ವಿಲನ್ ಆಗಿ ಪ್ರಭಾಸ್ ಅವರೇ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿದೆ.
ಪೊಲೀಸ್ ಆಗಿ ನಾಯಕನ ಪಾತ್ರವನ್ನು ಮಾಡಲಿದ್ದು, ನೆಗೆಟಿವ್ ಪಾತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ಒಂದೇ ಸಿನಿಮಾದಲ್ಲಿ ಪಾಸಿಟಿವ್ ಹಾಗೂ ನೆಗೆಟಿವ್ ಲುಕ್ ಪ್ರಭಾಸ್ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲು ಎಂದು ವರದಿ ತಿಳಿಸಿದೆ.
ಸಿನಿಮಾದ ಪಾತ್ರ ವರ್ಗದ ಬಗ್ಗೆ ಅಧಿಕೃತವಾಗಿ ಚಿತ್ರತಂಡದಿಂದ ಇನ್ನಷ್ಟೇ ಮಾಹಿತಿ ರಿವೀಲ್ ಆಗಬೇಕಿದೆ.
300 ಕೋಟಿ ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ ಎನ್ನಲಾಗಿದ್ದು, 2025ರ ಜನವರಿ ಮೊದಲ ವಾರದಲ್ಲಿ ಸೆಟ್ಟೇರಲಿದ್ದು, 2026ರ ಡಿಸೆಂಬರ್ ನಲ್ಲಿ ರಿಲೀಸ್ ಆಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.