Bantwal: ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿ ಅಪಸ್ವರ… ಆರ್.ಅಶೋಕ್ ಹೇಳಿದ್ದೇನು ?


Team Udayavani, Jul 31, 2024, 5:28 PM IST

Bantwal” ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿ ಅಪಸ್ವರ… ಆರ್.ಅಶೋಕ್ ಹೇಳಿದ್ದೇನು ?

ಬಂಟ್ವಾಳ: ಮೂಡಾ, ವಾಲ್ಮೀಕಿ ಹಗರಣವನ್ನು ಖಂಡಿಸಿ ಬಿಜೆಪಿ ಇದೇ ಆಗಸ್ಟ್ ೩ ರಂದು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಿರ್ಧರಿಸಿದ್ದು ಈ ನಡುವೆ ಇದೀಗ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದು ಇದೀಗ ಕುಮಾರಸ್ವಾಮಿ ಅವರ ಹೇಳಿಕೆಯ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಬಂಟ್ವಾಳದ ಬಡ್ಡಕಟ್ಟೆ, ಜಕ್ರಿಬೆಟ್ಟು ಕಿಂಡಿ ಅಣೆಕಟ್ಟು, ನಾವೂರು ಮನೆಗಳ ಮುಳುಗಡೆ, ಮಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಮಳೆ ರಾಜ್ಯದಲ್ಲಿ ದೊಡ್ಡ ರೀತಿಯ ಹಾನಿ ಮಾಡಿದೆ ಸಾವಿನ ಜೊತೆಗೆ ಹಲವು ರೀತಿಯಲ್ಲಿ ರಾಜ್ಯದಲ್ಲಿ ಹಾನಿಯಾಗಿದೆ ನಾನು ಕಂದಾಯ ಸಚಿವ ಆಗಿದ್ದಾಗ ರಾಜ್ಯ ಹಾಗೂ ಕೇಂದ್ರದಿಂದ ಸಮಾನ ಅನುದಾನ ಕೊಡ್ತಾ ಇದ್ದೆವು, ಹಿಂದೆ ನಮ್ಮ ಕಾಂಗ್ರೆಸ್ ಮಿತ್ರರು ಗಂಜಿಕೇಂದ್ರ ತೆರೀತಾ ಇದ್ದರು, ನಾನು ಅದನ್ನು ಬದಲಿಸಿ ಕಾಳಜಿ ಕೇಂದ್ರ ಮಾಡಿ ಮನೆ ಊಟ ಕೊಟ್ಟಿದ್ದೆ ಆದರೆ ಈಗ ಅಂಥದ್ದು ಎಲ್ಲೂ ನಮಗೆ ಕಾಣಿಸ್ತಾ ಇಲ್ಲ ಎಂದು ಹೇಳಿದರು. ಮಂಗಳೂರಿಗೆ ಉಸ್ತುವಾರಿ ಮಂತ್ರಿ ಬರದೇ 15 ದಿನ ಮೇಲಾಗಿದೆ ಅವರ ಹೈಕಮಾಂಡ್ ಜಿಲ್ಲಾ ಮಂತ್ರಿಗಳಿಗೆ ಸ್ಥಳದಲ್ಲಿರಲು ಹೇಳಿದ್ದರಂತೆ ಆದರೆ ಎಲ್ಲೂ ಜಿಲ್ಲಾ ಮಂತ್ರಿಗಳು ಜನರ ಜೊತೆಗೆ ಕಾಣುತ್ತಿಲ್ಲ ಎಂದ ಅವರು ರಮಾನಾಥ್ ರೈ ಅನ್ನೋ ಕಾಂಗ್ರೆಸ್ ಮುಖಂಡ ಆವತ್ತು ಪರಿಹಾರದ ವಿಚಾರದಲ್ಲಿ ಜಗಳ ಮಾಡಿದ್ದರು, ಸರ್ಕಾರ ಐದು ಲಕ್ಷ ಕೊಡೋದು ಕಂಜೂಸ್ ತನ ಅಂದಿದ್ದರು ಆದರೆ ಈಗ ಮೋದಿಯವರ ಸರಕಾರ 1.25 ಲಕ್ಷ ಕೊಡ್ತಾ ಇದೆ ಆದರೆ ರಾಜ್ಯ ಸರ್ಕಾರ ಏನ್ ಕೊಡ್ತಾ ಇದೆ, ನಿಮಗೆ ನಾಚಿಕೆ ಇಲ್ವಾ? ಹಾಗಿದ್ರೆ ಪ್ರವಾಹದ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಏನು? ಈ ಸರ್ಕಾರ ಬದುಕಿದೆ ಅಂತ ಜನರಿಗೆ ಗೊತ್ತೇ ಆಗ್ತಿಲ್ಲ, ಇದನ್ನು ಜನ ಗಮನಿಸುತ್ತಾ ಇದ್ದಾರೆ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ವಿತರಿಸಬೇಕು ಮುಖ್ಯಮಂತ್ರಿ ದೆಹಲಿ ಪ್ರವಾಸ ಬಿಟ್ಟು ರಾಜ್ಯಕ್ಕೆ ಬರಲಿ ನಿಮ್ಮ ಅಕ್ರಮಗಳಿಗೆ ಸ್ಪಷ್ಡನೆ ಕೊಡಲು ನೀವು ದೆಹಲಿಗೆ ಹೋಗಿದ್ದೀರಿ, ಅದೆಲ್ಲಾ ಮತ್ತೆ ಕೊಡಿ, ಮೊದಲು ರಾಜ್ಯದ ಜನರ ಸಮಸ್ಯೆ ಆಲಿಸಿ, ರಾಜ್ಯಾದ್ಯಂತ ಅಪಾರ ಹಾನಿ ಆಗಿದೆ, ಬೆಳೆ ಹಾನಿಯಾಗಿದೆ ರಾಜ್ಯ ಸರ್ಕಾರ ಸಮಾರೋಪದಿಯಲ್ಲಿ ಕೆಲಸ ಮಾಡಬೇಕಿದೆ ಮೊದಲು ಅದನ್ನು ಮಾಡಿ ಮತ್ತೆ ದೆಹಲಿಗೆ ತೆರಳಿ ಎಂದು ಕಿಡಿಕಾರಿದರು.

ಶಾಸಕರ ನೇತೃತ್ವದ ಟಾಸ್ಕ್ ಪೋರ್ಸ್ ಮಾಡಿ ಅದಕ್ಕೆ ಹಣ ಬಿಡುಗಡೆ ಮಾಡಿ, ರಸ್ತೆ ಸೇರಿ ಬೇರೆ ಸಮಸ್ಯೆ ಬಗೆಹರಿಸಲು ಐದು ಕೋಟಿ ಅನುದಾನ ಕೊಡಿ, ನಾನು ಮತ್ತು ಪಕ್ಷದ ಬೇರೆ ಬೇರೆ ನಾಯಕರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡ್ತಾ ಇದ್ದೇವೆ, ಎಲ್ಲಿ ಏನು ತಪ್ಪಾಗಿದೆಯೋ ಅದನ್ನ ಸರ್ಕಾರದ ಗಮನಕ್ಕೆ ತರ್ತಾ ಇದ್ದೇವೆ, ಇದೆಲ್ಲ ಮುಗಿದ ಮೇಲೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೀತಿನಿ, ನನ್ನ ಅವಧಿಯಲ್ಲಿ ಅರು ಸಾವಿರ ಕೋಟಿಗೂ ಹೆಚ್ಚು ಹಣ ಪ್ರವಾಹ ಪರಿಹಾರಕ್ಕೆ ಖರ್ಚು ಮಾಡಲಾಗಿದೆ. ಈ ಸರ್ಕಾರ ಹತ್ತು ರೂಪಾಯಿಯನ್ನೂ ಖಜಾನೆಯಿಂದ ಬಿಚ್ಚಿಲ್ಲ ಎಂದು ಹೇಳಿದರು.

ಇದೇ ವೇಳೆ ಮೂಡಾ, ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದು ಇದೀಗ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್. ಅಶೋಕ್ ನಾನು ಇದನ್ನ ಮಾಧ್ಯಮದಲ್ಲಿ ನೋಡಿದ್ದೇನೆ, ಕುಮಾರಸ್ವಾಮಿ ಕರೆ ಮಾಡಿದ್ರು, ಮತ್ತೆ ಮಾತನಾಡುತ್ತೇನೆ ನಮ್ಮ ಉದ್ದೇಶ ಈ ಬಿಸಿಯಲ್ಲೇ ಹೋರಾಟ ಆಗಬೇಕು ಅನ್ನೋದು, ಸಾವಿರಾರು ಕೋಟಿಯ ಭ್ರಷ್ಟಾಚಾರ ಆಗಿದೆ, ಸಂವಿಧಾನ ಕಾಪಾಡೋ ಸ್ಥಾನದಲ್ಲಿ ಸಿಎಂ ಇದ್ದಾರೆ, ನಾವು ಅನ್ಯಾಯ ಮಾಡಲ್ಲ ಅಂತೆಲ್ಲಾ ಪ್ರಮಾಣ ವಚನ ಸ್ವೀಕರಿಸ್ತಾರೆ, ಆದರೆ ಇಷ್ಟು ದೊಡ್ಡ ಹಗರಣ ಮಾಡಿ ಜನರ ಹಣ ಲೂಟಿ ಮಾಡಿದ್ದಾರೆ ಸದನದ ಒಳಗೂ ಎಲ್ಲರ ಜೊತೆಗೂ ಮಾತನಾಡಿ ಹೋರಾಟ ಆಗಿದೆ, ಕಾಂಗ್ರೆಸ್ ನವರು ಬಾಯಿ ಮುಚ್ಚೋ ರೀತಿಯಲ್ಲಿ ಹೋರಾಟ ಆಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಜಿ.ಟಿ.ದೇವೇಗೌಡರು ಕೂಡ ಪಾದಯಾತ್ರೆಗೆ ವಿರೋಧ ಮಾಡಿದ್ದಾರೆ ಕೃಷಿ, ಮಳೆ ವಿಚಾರ ಇಟ್ಟುಕೊಂಡು ಪಾದಯಾತ್ರೆ ಮುಂದೂಡಿ ಅಂದಿದ್ದಾರೆ, ನಾವು ಕೂಡ ಕೇಂದ್ರದ ನಾಯಕರ ಜೊತೆ ಈ ಬಗ್ಗೆ ಮಾತನಾಡ್ತೀವಿ, ಜೆಡಿಎಸ್ ಕೂಡ ಎನ್ ಡಿಎ ಭಾಗ, ಹೀಗಾಗಿ ಅವರು ಹೋರಾಟದಲ್ಲಿ ಒಟ್ಟಿಗೆ ಇರಬೇಕು, ನಾನು ಕುಮಾರಸ್ವಾಮಿ ಜೊತೆ ಮಾತನಾಡಿ ಸಂಜೆಯೊಳಗೆ‌ ನಿರ್ಧಾರಕ್ಕೆ ಬರ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಬಿ.ಕೆ.ಹರಿ ಪ್ರಸಾದ್ ಕೂಡ ಸಿದ್ದರಾಮಯ್ಯ ಲೂಟಿ ಮಾಡಿದ್ದಾರೆ ಅಂತಿದ್ದಾರೆ ಅವರೇ ಸಿದ್ದರಾಮಯ್ಯ ವಿರುದ್ದ ಆರೋಪ ಮಾಡ್ತಾ ಇದಾರೆ, ಮೊದಲು ಇವರ ಸರ್ಕಾರ ಉಳಿಯುತ್ತೋ ನೋಡುವ, ಇವರು ತಪ್ಪು ಮಾಡದೇ ದೆಹಲಿಗೆ ಹೋಗಿದಾರಾ? ಭಿನ್ನಮತ ಇರೋದಕ್ಕೆ ದೆಹಲಿಗೆ ಹೋಗಿದ್ದಾರೆ ನಾಯಕನ ಆಯ್ಕೆ ಮಾಡೋದು ಶಾಸಕಾಂಗ ಸಭೆ ಕರೆದು ಅದರಲ್ಲಿ ಅಗಿರೋದು ವಿಜಯೇಂದ್ರ ಅವರ ಆಯ್ಕೆ ಕೂಡ ರಾಷ್ಟ್ರೀಯ ಅಧ್ಯಕ್ಷರದ್ದು, ಪಕ್ಷದಲ್ಲಿ ಗೊಂದಲ ಇದ್ರೆ ಅದನ್ನ ಪಕ್ಷದ ಒಳಗೆ ಸರಿಪಡಿಸೋಣ ಯತ್ನಾಳ್ ಮತ್ತು ಜಾರಕಿಹೊಳಿ ಹೈಕಮಾಂಡ್ ಒಕೆ ಅಂದ್ರೆ ಪಾದಯಾತ್ರೆ ಅಂದಿರೋದು ಹೈಕಮಾಂಡ್ ಓಕೆ ಅಂದ್ರೆ ನಾವು ಮತ್ತೆ ನೋಡೋಣ ಎಂದು ಹೇಳಿದರು.

ಪ್ರೀತಂ ಗೌಡ ಬಗ್ಗೆ ಜೆಡಿ ಎಸ್ ಗೆ ಯಾಕೆ ವಿರೋಧ ಇದೆ ನನಗೆ ಗೊತ್ತಿಲ್ಲ ಈ ಬಗ್ಗೆ ದೆಹಲಿ ಮಟ್ಟದ ನಾಯಕರು ನೋಡಿಕೊಳ್ತಾರೆ ಇವತ್ತು ಸಂಜೆಯ ಒಳಗೆ ಪಾದಯಾತ್ರೆ ಬಗ್ಗೆ ನಿರ್ಧಾರ ಆಗುತ್ತೆ, ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಆದರೆ ಯಾವಾಗ ಪಾದಯಾತ್ರೆ ಆಗುತ್ತೆ ಅನ್ನೋದಷ್ಟೇ ವಿಚಾರ ಎಂದು ಹೇಳಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮೊದಲಾದ ನಾಯಕರು ಜತೆಗಿದ್ದರು.

ಇದನ್ನೂ ಓದಿ: UPSC ಯಿಂದ ಪೂಜಾ ಖೇಡ್ಕರ್ IAS ಅರ್ಹತೆಯೇ ರದ್ದು: ಭವಿಷ್ಯದ ಪರೀಕ್ಷೆಗಳಿಂದ ನಿರ್ಬಂಧ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.