T20 Cricket: ಕುಸಿತದಿಂದ ಪಾರಾದುದೇ ದೊಡ್ಡ ಸಾಧನೆ: ಸೂರ್ಯಕುಮಾರ್‌

Team Udayavani, Jul 31, 2024, 10:57 PM IST

T20 Cricket: ಕುಸಿತದಿಂದ ಪಾರಾದುದೇ ದೊಡ್ಡ ಸಾಧನೆ: ಸೂರ್ಯಕುಮಾರ್‌

ಪಲ್ಲೆಕೆಲೆ: ಇನ್ನೇನು ಸೋತೇ ಬಿಟ್ಟಿತು ಎಂಬ ಸ್ಥಿತಿಯಲ್ಲಿದ್ದ ಭಾರತ, ಮಂಗಳವಾರದ ಅಂತಿಮ ಟಿ20 ಪಂದ್ಯದಲ್ಲಿ ಶ್ರೀಲಂಕಾವನ್ನು ಸೂಪರ್‌ ಓವರ್‌ನಲ್ಲಿ ಮಣಿಸುವ ಮೂಲಕ ಅಸಾಮಾನ್ಯ ಸಾಹಸಗೈದದ್ದು, ಚಾಂಪಿಯನ್ನರ ಆಟವನ್ನಾಡಿ ಸರಣಿಯನ್ನು 3-0 ಅಂತರದಿಂದ ಕ್ಲೀನ್‌ಸ್ವೀಪ್ ಆಗಿ ವಶಪಡಿಸಿಕೊಂಡದ್ದು ಈಗ ಇತಿಹಾಸ.

ಈ ಸಂದರ್ಭದಲ್ಲಿ ಮಾತಾಡಿದ ನಾಯಕ ಸೂರ್ಯಕುಮಾರ್‌ ಯಾದವ್‌, ಕೊನೆಯ ಎರಡು ಓವರ್‌ಗಳಿಗಿಂತ 30ಕ್ಕೆ 4 ವಿಕೆಟ್‌, 48ಕ್ಕೆ 5 ವಿಕೆಟ್‌ ಕಳೆದುಕೊಂಡ ಸ್ಥಿತಿಯಲ್ಲಿದ್ದ ಭಾರತ 137ರ ತನಕ ಸಾಗಿದ್ದೇ ದೊಡ್ಡ ಸಾಧನೆ ಎಂದಿದ್ದಾರೆ.

“ಈ ಪಿಚ್‌ನಲ್ಲಿ 140 ರನ್‌ ಮಾಡಿದರೆ ಪಂದ್ಯ ಉಳಿಸಿಕೊಳ್ಳಬಹುದೆಂಬ ನಿರೀಕ್ಷೆ ಇತ್ತು. 220-220 ರನ್‌ ಮಾಡಿ ಗೆಲ್ಲುವುದಕ್ಕಿಂತ ಹೀಗೆ ಕುಸಿತದಿಂದ ಚೇತರಿಸಿಕೊಂಡು ಸಾಮಾನ್ಯ ಮೊತ್ತ ಗಳಿಸಿ ಜಯ ಸಾಧಿಸಿದಾಗ ಲಭಿಸುವ ಸಂತೋಷ ಹೆಚ್ಚು’ ಎಂದರು.

ಗೆಲುವು ಕಳೆದುಕೊಂಡ ಲಂಕಾ
ಭಾರತ 9 ವಿಕೆಟಿಗೆ 137 ರನ್‌ ಗಳಿಸಿದರೆ, ಶ್ರೀಲಂಕಾ 8 ವಿಕೆಟಿಗೆ 137 ರನ್‌ ಮಾಡಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತೆಂದೇ ಹೇಳಬಹುದು. 18 ಓವರ್‌ ಮುಕ್ತಾಯಕ್ಕೆ 4 ವಿಕೆಟಿಗೆ 129 ರನ್‌ ಮಾಡಿದ್ದ ಶ್ರೀಲಂಕಾ, ಅಂತಿಮ 2 ಓವರ್‌ಗಳಲ್ಲಿ 6 ವಿಕೆಟ್‌ಗಳಿಂದ 9 ರನ್‌ ಗಳಿಸದೇ ಹೋಯಿತು!

ಇಲ್ಲಿ ಭಾರತ ಬೌಲಿಂಗ್‌ ಟ್ರಿಕ್ಸ್‌ ಮಾಡಿತು. ಅಲ್ಲಿಯ ತನಕ ಚೆಂಡನ್ನೇ ಕೈಗೆತ್ತಿಕೊಳ್ಳದಿದ್ದ ರಿಂಕು ಸಿಂಗ್‌ 19ನೇ ಓವರ್‌ ಎಸೆಯಲು ಬಂದರು. ಕೇವಲ 3 ರನ್‌ ನೀಡಿ ಇಬ್ಬರನ್ನು ಔಟ್‌ ಮಾಡಿದರು. ಅಂತಿಮ ಓವರ್‌ ಮೊಹಮ್ಮದ್‌ ಸಿರಾಜ್‌ ಪಾಲಾಗಬಹುದೆಂಬುದು ಎಲ್ಲರ ನಿರೀಕ್ಷೆ ಆಗಿತ್ತು. ಅವರು 3 ಓವರ್‌ಗಳಿಂದ ಕೇವಲ 11 ರನ್‌ ನೀಡಿ ನಿಯಂತ್ರಣ ಸಾಧಿಸಿದ್ದರು. ಆದರೆ ಸ್ವತಃ ಸೂರ್ಯಕುಮಾರ್‌ ಯಾದವ್‌ ಬೌಲಿಂಗ್‌ಗೆ

ಇಳಿಯುವ ಮೂಲಕ ಎಲ್ಲರ ಹುಬ್ಬೇರಿಸಿದರು. ಕೇವಲ 5 ರನ್‌ ನೀಡಿ, 2 ವಿಕೆಟ್‌ ಕಬಳಿಸಿ ಪಂದ್ಯವನ್ನು ಸೂಪರ್‌ ಓವರ್‌ಗೆ ಕೊಂಡೊಯ್ದರು!

ಸೂಪರ್‌ ಓವರ್‌…
ಸೂಪರ್‌ ಓವರ್‌ನಲ್ಲೂ ಅಚ್ಚರಿ ಕಾದಿತ್ತು. ಚೆಂಡನ್ನು ವಾಷಿಂಗ್ಟನ್‌ ಸುಂದರ್‌ಗೆ ಹಸ್ತಾಂತರಿಸಲಾಯಿತು. ಈ ನಡೆ ಕೂಡ ಸೂಪರ್‌ ಹಿಟ್‌ ಆಯಿತು. 3 ಎಸೆತಗಳಲ್ಲಿ 2 ರನ್ನಿಗೆ ಲಂಕೆಯ ಎರಡೂ ವಿಕೆಟ್‌ ಬಿತ್ತು. ಬಳಿಕ ಸೂರ್ಯಕುಮಾರ್‌ ಮೊದಲ ಎಸೆತವನ್ನೇ ಬೌಂಡರಿಗೆ ಬಡಿದಟ್ಟಿ ಭಾರತದ ಗೆಲುವು ಸಾರಿದರು!
ಶುಕ್ರವಾರ ಏಕದಿನ ಸರಣಿ ಆರಂಭವಾಗಲಿದೆ.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.