Shimoga; ಬಿಜೆಪಿ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ ಮಾಡುತ್ತಿದೆ: ಶಾಸಕ ಬೇಳೂರು


Team Udayavani, Aug 1, 2024, 2:37 PM IST

Shimoga; ಬಿಜೆಪಿ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ ಮಾಡುತ್ತಿದೆ: ಶಾಸಕ ಬೇಳೂರು

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯ ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ಮೂರು ಕ್ರಸ್ಟ್‌ ಗೇಟ್‌ ಮೂಲಕ ಶರಾವತಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿರುವ ಜಲಾಶಯ ಬಹುತೇಕ ಭರ್ತಿ ಹಿನ್ನೆಲೆ ಮೂರು ಗೇಟ್ ಗಳ ಮೂಲಕ ಅಧಿಕಾರಿಗಳು ನದಿಗೆ ನೀರು ಬಿಟ್ಟಿದ್ದಾರೆ.  10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಇದೇ ವೇಳೆ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡಿದ ಅವರು,ಕಳೆದ ವರ್ಷ ಬರಗಾಲ ಆವರಿಸಿತ್ತು. ಈ ಬಾರಿ ಸಾಕಷ್ಟು ಮಳೆಯಾಗಿದೆ. ಐದು ವರ್ಷದ ನಂತರ ಶರಾವತಿ ಭರ್ತಿಯಾಗಿದೆ. ಲಿಂಗನಮಕ್ಕಿ‌ ಜಲಾಶಯದಿಂದ 3 ಗೇಟ್ ಗಳ ಮೂಲಕ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದೇವೆ. ಸಾಗರ ತಾಲೂಕಿನಲ್ಲಿ ಅಷ್ಟೇ ಹಾನಿಯಾಗಿದೆ. ಹೊಲ ಗದ್ದೆ ಜಲಾವೃತವಾಗಿವೆ. ಮನೆಗಳು ಹಾನಿಯಾಗಿವೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸಮಸ್ಯೆ ನೀಗಲಿದೆ ಎಂದರು.

ಸಾಗರ ಕ್ಷೇತ್ರದಲ್ಲಿ 100 ಮನೆಗಳು ಕುಸಿದು ಬಿದ್ದಿವೆ. ಸದ್ಯ 10 ಸಾವಿರ ಪರಿಹಾರ ಕೊಟ್ಟಿದ್ದೇವೆ. ಜೋಗ ಜಲಪಾತ ಅಭಿವೃದ್ಧಿಗೆ 183 ಕೋಟಿ ಬಿಡುಗಡೆ ಆಗಿತ್ತು. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಒಂದೇ ಒಂದು ರೂಪಾಯಿ ಹಣ ಬಿಡುಗಡೆ ಮಾಡಲಿಲ್ಲ. ಸಂಸದ ರಾಘವೇಂದ್ರ ಸುಮ್ಮನೆ ಬೊಗಳೆ ಬಿಟ್ಟರು. ನಮ್ಮ ಸರಕಾರ ಬಂದ ಮೇಲೆ 95 ಕೋಟಿ ಹಣ ಬಿಡುಗಡೆ ಮಾಡಿದೆ ಎಂದರು.

ಬಿಜೆಪಿ ‌ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಪಾದಯಾತ್ರೆ ಗೊಂದಲ‌ಕ್ಕೆ ಕಾರಣವಾಗಿದೆ. ಪಾದಯಾತ್ರೆ ಮಾಡುವ ಅವಶ್ಯಕತೆ ‌ಇಲ್ಲ. ಯತ್ನಾಳ್ ನಾನೊಂದು ಕಡೆ ಪಾದಯಾತ್ರೆ ಮಾಡುತ್ತೇನೆ ಎನ್ನುತ್ತಾರೆ, ಜಾರಕಿಹೊಳಿ‌ ನಾನೊಂದು ಕಡೆ ಪಾದಯಾತ್ರೆ ಮಾಡ್ತೀನಿ ಅಂತಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಬಲವಾಗುತ್ತದೆಂಬ ಕಾರಣಕ್ಕೆ ಕುಮಾರಸ್ವಾಮಿ ನಾನು ಬೆಂಬಲ ಕೊಡಲ್ಲ ಎನ್ನುತ್ತಿದ್ದಾರೆ. ಬಿಜೆಪಿ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ ಮಾಡುತ್ತಿದೆ ಅಷ್ಟೇ ಎಂದರು.

ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಮಾತನಾಡಿ, ಏನಪ್ಪ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲಾ ಹಾಗೆ ಮಾತನಾಡುತ್ತಿದ್ದಾರೆ. ನಿಮ್ಮ ಮಾಧ್ಯಮಗಳಲ್ಲಿ ಹಾಗೆ ಬರುತ್ತಿದೆ‌ ನೋಡಿದ್ದೇನೆ ಅಷ್ಟೇ ಎಂದರು.

ಶರಾವತಿ ನೀರು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ವಿಚಾರವಾಗಿ ಮಾತನಾಡಿ, ಕುಡಿಯುವ ನೀರಿಗೆ ಕೊಡಲು ಯಾರ ವಿರೋಧವೂ ಇಲ್ಲ. ಶರಾವತಿ ಮುಳುಗಡೆ ಪ್ರದೇಶದವರಿಗೆ 24 ಗಂಟೆ ವಿದ್ಯುತ್ ಕೊಟ್ಟರೆ ನೀರು ತೆಗೆದುಕೊಂಡು ‌ಹೋಗಿ ನಿರಂತರ ವಿದ್ಯುತ್ ಕೊಟ್ಟರೆ ನಮ್ಮ ವಿರೋಧ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.