Wayanad landslide: ಭೂಕುಸಿತದಿಂದ ಮನೆ – ಮನ ಕಳೆದುಕೊಂಡವರ ನೆರವಿಗೆ ಧಾವಿಸಿದ ಚಿತ್ರರಂಗ


Team Udayavani, Aug 1, 2024, 4:04 PM IST

Wayanad landslide: ಕೇರಳ ಭೂಕುಸಿತ ಸಂತ್ರಸ್ತರ ನೆರವಿಗೆ ಧಾವಿಸಿದ ಚಿತ್ರರಂಗ

ಕೊಚ್ಚಿ: ಕೇರಳದ ವಯನಾಡು ಭೀಕರ ಭೂಕುಸಿತದಿಂದ (Wayanad landslide) ಅಕ್ಷರಶಃ ತತ್ತರಿಸಿದೆ. ಹೆಣಗಳ ರಾಶಿ ಒಂದೆಡೆಯಾದರೆ, ಇನ್ನೊಂದು ಕಡೆ ತಮ್ಮವರನ್ನು ಕಳೆದುಕೊಂಡ ಕುಟುಂಬಗಳ ದುಃಖ ಮುಗಿಲುಮುಟ್ಟಿದೆ.

ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರ್ಮಲಾ, ಅಟ್ಟಮಾಲ್ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹೆಚ್ಚು ಹಾನಿಗೊಳಗಾಗಿದೆ. ಇತ್ತೀಚೆಗಿನ ವರದಿಗಳ ಪ್ರಕಾರ, ಕನಿಷ್ಠ 256 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿವೆ. ಸೇನೆ ಇದುವರೆಗೆ ಸುಮಾರು 1,000 ಜನರನ್ನು ರಕ್ಷಿಸಿದೆ ಮತ್ತು 220 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 1,000 ಕ್ಕೂ ಹೆಚ್ಚು ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬದುಕುಳಿದವರು ತಮ್ಮವರನ್ನು ಹುಡುಕಲು ಹಗಲು ರಾತ್ರಿ ಭೂಕುಸಿತವಾದ ಜಾಗದಲ್ಲೇ ಬೀಡುಬಿಟ್ಟಿದ್ದಾರೆ.

ಭೂಕುಸಿತದಿಂದ ಕೋಟಿ ಕೋಟಿ ನಷ್ಟವಾಗಿದ್ದು, ಉದ್ಯಮಿಗಳು ಹಾಗೂ ಸಿನಿಮಾರಂಗದ ಕಲಾವಿದರು ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.

ಕೇರಳ ಸಿಎಂ ರಿಲೀಫ್‌ ಫಂಡ್‌ಗೆ ಕಾಲಿವುಡ್‌ ನಟ ಚಿಯಾನ್‌ ವಿಕ್ರಮ್‌ (Chiyaan Vikram) 20 ಲಕ್ಷ ರೂ. ನೆರವನ್ನು ನೀಡಿದ್ದಾರೆ ಈ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ನಟ ವಿಕ್ರಮ್ ಮ್ಯಾನೇಜರ್ ಯುವರಾಜ್ ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಟ ವಿಕ್ರಮ್‌ ಅವರ ಮಾನವೀಯ ಗುಣವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಇತ್ತ ನಟಿ ರಶ್ಮಿಕಾ ಮಂದಣ್ಣ (Rashmika Mandanna) 10 ಲಕ್ಷ ರೂ. ನೆರವನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಹಿರಿಯ ನಟರಾದ ಮೋಹನ್‌ ಲಾಲ್‌(Mohanlal),  ಮಮ್ಮುಟ್ಟಿ(Mammootty), ಕಾರ್ತಿ( Karthi ), ಸೂರ್ಯ(Suriya Sivakumar), ಜ್ಯೋತಿಕಾ(Jyotika), ಮಾಳವಿಕ ಮೋಹನ್ (Malavika Mohana), , ಮಂಜು ವಾರಿಯರ್, ಆಸಿಫ್ ಅಲಿ, ಟೊವಿನೋ ಥಾಮಸ್, ನಿಖಿಲಾ ವಿಮಲ್, ಬೆಸಿಲ್ ಜೋಸೆಫ್ ಸೇರಿದಂತೆ ಹಲವು ಕಲಾವಿದರು ನೆರವಿಗೆ ಮುಂದೆ ಬಂದಿದ್ದಾರೆ.‌

ಕಾರ್ತಿ, ಸೂರ್ಯ ಮತ್ತು ಜ್ಯೋತಿಕಾ ಒಟ್ಟಾಗಿ 50 ಲಕ್ಷ ರೂ. ನೀಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ ವಿಕ್ರಮ್‌ ಪಾ ರಂಜಿತ್‌ ಅವರ ʼತಂಗಲಾನ್‌ʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಆಗಸ್ಟ್‌ 15ರಂದು ಸಿನಿಮಾ ರಿಲೀಸ್‌ ಆಗಲಿದೆ. ಇದಾದ ಬಳಿಕ ಅವರು, ‘ವೀರ ಧೀರನ್ ಸೂರನ್: ಪಾರ್ಟ್- 2’‌ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.