Mangaluru ಮಾದಕ ವಸ್ತು ಸೇವನೆ; ಇಬ್ಬರು ವಶಕ್ಕೆ
Team Udayavani, Aug 2, 2024, 12:51 AM IST
ಮಂಗಳೂರು: ಸಾರ್ವಜನಿಕ ಪ್ರದೇಶದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರನ್ನು ಬರ್ಕೆ ಮತ್ತು ಉರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಾಲ್ಭಾಗ್ ಬಳಿ ಅಮಲು ಪದಾರ್ಥ ಸೇವನೆ ಮಾಡಿ ತೂರಾಡುತ್ತಿದ್ದ ಕಾಸರಗೋಡು ಹೊಸದುರ್ಗ ಕಡಪುರಂ ನಿವಾಸಿ ಅಜಾಸ್ ಕೆ. (20)ನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಟೆಟ್ರಾಹೈಡ್ರಾಕೆನಬಿನಾಯ್ಡ ಎನ್ನುವ ಮಾದಕ ವಸ್ತು ಸೇವೆ ಮಾಡಿರುವುದು ದೃಢಪಟ್ಟಿದೆ. ಚಿಲಿಂಬಿಗುಡ್ಡೆ ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ಕಲ್ಬಾವಿ ರೋಡ್ ಸಂಕಪ್ಪ ಕಾಂಪೌಂಡ್ ನಿವಾಸಿ ಪ್ರೀತಂ ಯಾನೆ ಅಭಿ (33)ನನ್ನು ಉರ್ವ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.